ಅಶ್ವಿನಿ ಗೌಡ ವರ್ಸಸ್ ಗಿಲ್ಲಿ ನಟ: ಬಿಗ್ ಬಾಸ್ ಮನೆಯಲ್ಲಿ ಜೋರಾಯ್ತು ಜಗಳ

Updated on: Oct 02, 2025 | 5:11 PM

ಹೋರಾಟಗಾರ್ತಿ, ನಟಿ ಅಶ್ವಿನಿ ಗೌಡ ಅವರು ಬಿಗ್ ಬಾಸ್ ಮನೆಗೆ ಕಾಲಿಟ್ಟಾಗಿನಿಂದ ಜಗಳದ ಮೂಲಕವೇ ಹೆಚ್ಚು ಹೈಲೈಟ್ ಆಗುತ್ತಿದ್ದಾರೆ. ಅವರ ಜತೆ ಗಿಲ್ಲಿ ನಟ ಅನೇಕ ಬಾರಿ ಕಿರಿಕ್ ಮಾಡಿಕೊಂಡಿದ್ದಾರೆ. ನಾಲ್ಕು ದಿನ ಕಳೆಯುವುದರೊಳಗೆ ಅಶ್ವಿನಿ ಗೌಡ ವರ್ಸಸ್ ಗಿಲ್ಲಿ ನಟ ಎಂಬ ವಾತಾವರಣ ಶುರು ಆಗಿದೆ.

ನಟಿ, ಹೋರಾಟಗಾರ್ತಿ ಅಶ್ವಿನಿ ಗೌಡ (Ashwini Gowda) ಅವರು ಬಿಗ್ ಬಾಸ್ ಮನೆಗೆ ಕಾಲಿಟ್ಟಾಗಿನಿಂದ ಜಗಳದ ಮೂಲಕ ಹೈಲೈಟ್ ಆಗುತ್ತಿದ್ದಾರೆ. ಅವರ ಜೊತೆ ಗಿಲ್ಲಿ ನಟ ಹಲವು ಬಾರಿ ಕಿರಿಕ್ ಮಾಡಿಕೊಂಡಿದ್ದಾರೆ. 4 ದಿನ ಕಳೆಯುವುದರೊಳಗೆ ಅಶ್ವಿನಿ ಗೌಡ ವರ್ಸಸ್ ಗಿಲ್ಲಿ ನಟ ಎಂಬ ವಾತಾವರಣ ನಿರ್ಮಾಣ ಆಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋನಲ್ಲಿ ಅನೇಕ ಟ್ವಿಸ್ಟ್​ಗಳು ಇರಲಿವೆ. 3ನೇ ವಾರವೇ ಒಂದು ಫಿನಾಲೆ ಇರಲಿದೆ ಎಂದು ಹೇಳಲಾಗಿದೆ. ಮೊದಲ ವಾರದ ಆಟವೇ ರೋಚಕವಾಗಿದೆ. ಒಂಟಿಗಳ ಗುಂಪಿನಲ್ಲಿ ಅಶ್ವಿನಿ ಗೌಡ ಇದ್ದಾರೆ. ಗಿಲ್ಲಿ ನಟ (Gilli Nata) ಅವರು ಕಾವ್ಯ ಶೈವ ಜೊತೆ ಜಂಟಿಯಾಗಿ ಟಾಸ್ಕ್ ಆಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.