ಕುಟುಂಬಗಳ ನಡುವೆ ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್ ಫೈಟ್
8 ಎಕರೆ ಗದ್ದೆ ಸಲುವಾಗಿ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ನದಿಹರಹಳ್ಳಿಯಲ್ಲಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಕೆಸರು ಗದ್ದೆಯಲ್ಲಿಯೇ ಪರಸ್ಪರ ಬಡಿದಾಡಿಕೊಂಡಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಹಲ್ಲೆಗೊಳಗಾದವರನ್ನು ತಾಲೂಕು ಮತ್ತು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಮಾರಪಟ್ಟಣಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಾವೇರಿ, ಜನವರಿ 09: ಆಸ್ತಿ ವ್ಯಾಜ್ಯ ಹಿನ್ನೆಲೆ ಕೆಸರು ಗದ್ದೆಯಲ್ಲೇ 2 ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ನದಿಹರಹಳ್ಳಿಯಲ್ಲಿ ನಡೆದಿದೆ. 8 ಎಕರೆ ಗದ್ದೆ ಸಲುವಾಗಿ ಕೋಟೆಗೌಡ ಮತ್ತು ಚನ್ನಗೌಡ ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಎರಡೂ ಕುಟುಂಬದ ಸದಸ್ಯರಿಗೆ ಗಂಭೀರ ಗಾಯಗಳಾಗಿವೆ. ಹಲ್ಲೆಗೊಳಗಾದವರನ್ನು ತಾಲೂಕು ಮತ್ತು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕುಮಾರಪಟ್ಟಣಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jan 09, 2026 04:53 PM
Latest Videos

