20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ

Updated on: Oct 22, 2024 | 9:35 PM

ಕೇವಲ 20 ರೂಪಾಯಿಗಾಗಿ ಜಗಳ ಉಂಟಾಗಿದ್ದು, ಇ-ರಿಕ್ಷಾ ಚಾಲಕನಿಗೆ ಮಹಿಳೆಯೊಬ್ಬರು ಚಪ್ಪಲಿಯಲ್ಲಿ ಹೊಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಲಕ್ನೋದಲ್ಲಿ ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಲಕ್ನೋ: ಉತ್ತರ ಪ್ರದೇಶದ ಲಕ್ನೋದ ಅಮೀನಾಬಾದ್‌ನ ಮೌಲ್ವಿ ಗಂಜ್‌ನಲ್ಲಿ ಇ-ರಿಕ್ಷಾ ಚಾಲಕನೊಂದಿಗೆ ಮಹಿಳೆಯರು ಜಗಳವಾಡಿದ್ದಾರೆ. ಕೇವಲ 20 ರೂ.ಗೆ ಶುರುವಾದ ಜಗಳದ ನಂತರ ಮಹಿಳೆಯೊಬ್ಬರು ತಮ್ಮ ಚಪ್ಪಲಿಯನ್ನು ತೆಗೆದು ರಿಕ್ಷಾ ಚಾಲಕನಿಗೆ ನಡುರಸ್ತೆಯಲ್ಲೇ ಥಳಿಸಿದ್ದಾರೆ. ಈ ವೇಳೆ ರಿಕ್ಷಾ ಚಾಲಕ ಹಾಗೂ ಮಹಿಳೆ ನಡುವೆ ತೀವ್ರ ವಾಗ್ವಾದ ನಡೆದಿದೆ. ಅಲ್ಲಿದ್ದ ವ್ಯಕ್ತಿಯೊಬ್ಬ ಇಬ್ಬರ ನಡುವಿನ ಜಗಳವನ್ನು ವಿಡಿಯೋ ಮಾಡತೊಡಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More