ಫಿಲ್ಮ್​ ಚೇಂಬರ್​ ಚುನಾವಣೆಯಲ್ಲಿ ಗೆಲುವಿಗಾಗಿ ದೇವರ ಮೊರೆ ಹೋದ ಭಾ.ಮ. ಹರೀಶ್​; ಇಲ್ಲಿದೆ ವಿಡಿಯೋ

Film Chamber Election: ಎಲೆಕ್ಷನ್​ ಆರಂಭಕ್ಕೆ ಕೆಲವೇ ಗಂಟೆಗಳು ಇರುವಾಗ ನಿರ್ಮಾಪಕ ಭಾ.ಮ. ಹರೀಶ್​ ಅವರು ದೇವರ ಮೊರೆ ಹೋಗಿದ್ದಾರೆ. ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

TV9kannada Web Team

| Edited By: Madan Kumar

May 28, 2022 | 9:56 AM

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber Of Commerce) ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು (ಮೇ 28) ನಡೆಯಲಿದೆ. ಮತದಾನಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ಸಾ.ರಾ. ಗೋವಿಂದು ಮತ್ತು ಭಾ.ಮ. ಹರೀಶ್ (Ba Ma Harish)​ ಅವರು ಸ್ಪರ್ಧಿಸುತ್ತಿದ್ದಾರೆ. ಬೆಂಗಳೂರಿನ ಗುರುರಾಜ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 2 ಗಂಟೆಯಿಂದ ಮತದಾನ ಆರಂಭ ಆಗಲಿದ್ದು, ಸಂಜೆ 6 ಗಂಟೆವರೆಗೂ ನಡೆಯಲಿದೆ. ರಾತ್ರಿ ವೇಳೆಗೆ ಫಲಿತಾಂಶ ಹೊರಬೀಳಲಿದೆ. ಅಧ್ಯಕ್ಷರ ಜೊತೆಗೆ ಪದಾಧಿಕಾರಿಗಳ ಆಯ್ಕೆ ಕೂಡ ಇಂದು ನಡೆಯಲಿದೆ. ಎಲೆಕ್ಷನ್​ (Film Chamber Election) ಆರಂಭಕ್ಕೆ ಕೆಲವೇ ಗಂಟೆಗಳು ಇರುವಾಗ ನಿರ್ಮಾಪಕ ಭಾ.ಮ. ಹರೀಶ್​ ಅವರು ದೇವರ ಮೊರೆ ಹೋಗಿದ್ದಾರೆ. ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಅವರು ಪ್ರಾರ್ಥನೆ ಸಲ್ಲಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

Follow us on

Click on your DTH Provider to Add TV9 Kannada