KKR vs SRH Viral Moment: 4,4,6,6,4.. ಮೊದಲ ಓವರ್ನಲ್ಲೇ ಅಬ್ಬರಿಸಿದ ಅಲೆನ್
Fin Allen's Explosive IPL 2026 Start: ಕೋಲ್ಕತ್ತಾದಲ್ಲಿ ನಡೆದ ಐಪಿಎಲ್ 2026ರ ಕೆಕೆಆರ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಪಂದ್ಯದಲ್ಲಿ ಫಿನ್ ಅಲೆನ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಸನ್‌ರೈಸರ್ಸ್‌ನ 226 ರನ್ ಗುರಿ ಬೆನ್ನಟ್ಟಿದ ಕೆಕೆಆರ್‌ಗೆ ಅಲೆನ್ ಮೊದಲ ಓವರ್‌ನಲ್ಲಿ 24 ರನ್ ಸೇರಿದಂತೆ ಒಟ್ಟು 7 ಎಸೆತಗಳಲ್ಲಿ 28 ರನ್ ಗಳಿಸಿ ಭರ್ಜರಿ ಆರಂಭ ನೀಡಿದರು. ಅವರ ಅಬ್ಬರದ ಆಟ ಪಂದ್ಯದ ರೋಚಕತೆಯನ್ನು ಹೆಚ್ಚಿಸಿತು.
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2026 ರ 6ನೇ ಪಂದ್ಯದಲ್ಲಿ ಕೆಕೆಆರ್ ತಂಡ, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ 226 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್ ಪರ ಆರಂಭಿಕ ಫಿನ್ ಅಲೆನ್ ಮೊದಲ ಓವರ್ನಲ್ಲೇ ಬೌಂಡರಿ ಹಾಗೂ ಸಿಕ್ಸರ್ಗಳ ಮಳೆಗರೆದು 25 ರನ್ ಕಲೆಹಾಕಿದರು.
ಸನ್‌ರೈಸರ್ಸ್ ಪರ ಡೇವಿಡ್ ಪೇನ್ ಮೊದಲ ಓವರ್ ಬೌಲ್ ಮಾಡಿದರು. ಈ ಓವರ್ನ ಮೊದಲ ಎಸೆತವನ್ನು ಎದುರಿಸಿದ ನಾಯಕ ಅಜಿಂಕ್ಯ ರಹಾನೆ ಸಿಂಗಲ್ ತೆಗೆದುಕೊಂಡು ಅಲೆನ್ಗೆ ಸ್ಟ್ರೈಕ್ ನೀಡಿದರು. ಅಲೆನ್ ತಾವು ಎದುರಿಸಿದ ಮೊದಲ ಎಸೆತವನ್ನೇ ಬೌಂಡರಿಗಟ್ಟಿದರು. ನಂತರದ ಎರಡು ಎಸೆತಗಳಲ್ಲಿ ಭರ್ಜರಿ ಸಿಕ್ಸರ್ ಬಾರಿಸಿದರು. ಕೊನೆಯ ಎರಡು ಎಸೆತಗಳಲ್ಲಿ ಬೌಂಡರಿ ಬಂತು. ಈ ಮೂಲಕ ಅಲೆನ್ ತಾವು ಎದುರಿಸಿದ ಐದು ಎಸೆತಗಳಲ್ಲಿ 24 ರನ್ ಕಲೆಹಾಕಿದರು.
ಆ ಬಳಿಕವೂ ಅಬ್ಬರಿಸಿದ ಅಲೆನ್ ಮುಂದಿನ ಓವರ್‌ನಲ್ಲಿ ಎದುರಿಸಿದ ಮೊದಲ ಎಸೆತವನ್ನು ಬೌಂಡರಿಗಟ್ಟಿದರು. ಆದರೆ ಮುಂದಿನ ಎಸೆತದಲ್ಲಿ ಮತ್ತೊಂದು ಬೌಂಡರಿ ಬಾರಿಸಲು ಯತ್ನಿಸಿ ಬೌಲರ್ ಹರ್ಷ್ ದುಬೆಗೆ ಕ್ಯಾಚಿತ್ತು ಔಟಾದರು. ಅಂತಿಮವಾಗಿ ಅಲೆನ್ ತಮ್ಮ ಇನ್ನಿಂಗ್ಸ್ನಲ್ಲಿ 7 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 28 ರನ್ ಬಾರಿಸಿ ಔಟಾದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

