Bigg Boss Kannada: ಬಿಗ್ ಬಾಸ್ ಫಿನಾಲೆಗೆ ಶುರುವಾಯ್ತು ಕೌಂಟ್​ಡೌನ್

Updated on: Jan 27, 2024 | 2:30 PM

ಫಿನಾಲೆಗೆ ಕೌಂಟ್​ಡೌನ್ ಶುರುವಾಗಿದೆ ಎಂಬುದನ್ನು ತೋರಿಸಲು ಕಲರ್ಸ್ ಕನ್ನಡ ವಾಹಿನಿ ಹೊಸ ಪ್ರೋಮೋ ಹಂಚಿಕೊಂಡಿದೆ. ಕಿಚ್ಚ ಸುದೀಪ್ ಅವರು ಈ ವಾರ ಫೈನಲ್ ವೀಕ್​ನ ನಿರೂಪಣೆ ಮಾಡಲಿದ್ದಾರೆ.

ನೋಡ ನೋಡುತ್ತಿದ್ದಂತೆ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಫಿನಾಲೆ ಬಂದೇ ಬಿಟ್ಟಿದೆ. ಆರು ಸ್ಪರ್ಧಿಗಳ ಮಧ್ಯೆ ಸ್ಪರ್ಧೆ ನಡೆಯುತ್ತಿದೆ. ತುಕಾಲಿ ಸಂತೋಷ್, ವರ್ತೂರು ಸಂತೋಷ್, ವಿನಯ್ ಗೌಡ (Vinay Gowda), ಕಾರ್ತಿಕ್ ಮಹೇಶ್, ಸಂಗೀತಾ ಶೃಂಗೇರಿ ಹಾಗೂ ಡ್ರೋನ್ ಪ್ರತಾಪ್ ಮಧ್ಯೆ ಒಬ್ಬರು ಕಪ್ ಎತ್ತಲಿದ್ದಾರೆ. ಫಿನಾಲೆಗೆ ಕೌಂಟ್​ಡೌನ್ ಶುರುವಾಗಿದೆ ಎಂಬುದನ್ನು ತೋರಿಸಲು ಕಲರ್ಸ್ ಕನ್ನಡ ವಾಹಿನಿ ಹೊಸ ಪ್ರೋಮೋ ಹಂಚಿಕೊಂಡಿದೆ. ಕಿಚ್ಚ ಸುದೀಪ್ ಅವರು ಈ ವಾರ ಫೈನಲ್ ವೀಕ್​ನ ನಿರೂಪಣೆ ಮಾಡಲಿದ್ದಾರೆ. ಯಾರು ಗೆಲ್ಲುತ್ತಾರೆ ಎನ್ನುವ ಕುತೂಹಲ ಮೂಡಿದೆ. ಅಂದಹಾಗೆ ಈ ಪ್ರೋಮೋದಲ್ಲಿ ತೋರಿಸಿರೋದು ಕಿಚ್ಚನ ಹಳೆಯ ಲುಕ್. ಅವರ ಇಂದಿನ (ಜೂನ್ 27) ಲುಕ್ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Jan 27, 2024 12:21 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More