ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆಯ ದಿನ: ನಾಳೆ ಮಧ್ಯಾಹ್ನ 12 ಗಂಟೆಗೆ ಗರ್ಭಗುಡಿಯ ಬಾಗಿಲು ಕ್ಲೋಸ್​

Edited By:

Updated on: Nov 10, 2026 | 8:32 AM

ವರ್ಷಕ್ಕೊಮ್ಮೆ ದರ್ಶನ ನೀಡುವ ವಿಶ್ವಪ್ರಸಿದ್ಧ ಹಾಸನಾಂಬೆಯ ಈ ವರ್ಷದ ದರ್ಶನಕ್ಕೆ ಇಂದೇ ಕೊನೆಯ ದಿನವಾಗಿದೆ. ಹಿಂದಿನ‌ ಎಲ್ಲಾ ವರ್ಷಗಳಿಗೂ ಮೀರಿ ದಾಖಲೆ ಮಟ್ಟದ ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದು, ಕಳೆದ 11 ದಿನಗಳಲ್ಲಿ 25 ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆದಿದ್ದಾರೆ.₹23.67 ಕೋಟಿ ರೂ. ಗಳಿಗೂ ಅಧಿಕ ಆದಾಯ ಸಂಗ್ರಹವಾಗಿದೆ.

ಹಾಸನ, ನವೆಂಬರ್​​ 10: ವರ್ಷಕ್ಕೆ ಒಮ್ಮೆ ಮಾತ್ರ ಗರ್ಭಗುಡಿಯ ಬಾಗಿಲು ತೆರೆಯುವ ಹಾಸನದ ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆಯ ದಿನವಾಗಿದ್ದು, ನಾಳೆ ಮಧ್ಯಾಹ್ನ 12 ಗಂಟೆಗೆ ಗರ್ಭಗುಡಿಯ ಬಾಗಿಲು ಮುಚ್ಚಲಿದೆ. ಇಂದು ರಾತ್ರಿ ವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶವಿರಲಿದ್ದು, ಕಳೆದ 11 ದಿನದಲ್ಲಿ 25 ಲಕ್ಷಕ್ಕೂ ಅಧಿಕ ಭಕ್ತರಿಂದ ಹಾಸನಾಂಬೆ ದರ್ಶನ ನಡೆದಿದೆ. ಹಿಂದಿನ‌ ಎಲ್ಲಾ ವರ್ಷಗಳಿಗೂ ಮೀರಿ ದಾಖಲೆ ಮಟ್ಟದ ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದು, ಈವರೆಗೂ ದೇಗುಲಕ್ಕೆ 23 ಕೋಟಿ 67 ಲಕ್ಷ ಆದಾಯ ಸಂಗ್ರಹವಾಗಿದೆ. ಟಿಕೆಟ್​​​, ಲಡ್ಡು ಪ್ರಸಾದ ಮಾರಾಟದಿಂದ ಹೆಚ್ಚಿನ ಆದಾಯ ಬಂದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More