ಹಾಸನಾಂಬ ದರ್ಶನಕ್ಕೆ ಇಂದೇ ಕೊನೆದಿನ: 8 ಕಿ.ಮೀ ಮುಟ್ಟಿದ ಧರ್ಮದರ್ಶನ ಸಾಲು
ರಾಜ್ಯದ ಪ್ರಸಿದ್ಧ ಹಾಸನಾಂಬೆ ದೇವಿಯ ದರ್ಶನೋತ್ಸವ ಅಂತಿಮ ಘಟ್ಟ ತಲುಪಿದ್ದು, ಅಮ್ಮನ ದರ್ಶನಕ್ಕೆ ಇಂದು(ಅಕ್ಟೋಬರ್ 22) ಕೊನೆ ದಿನವಾಗಿದೆ. ಹೀಗಾಗಿ ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಸದ್ಯ ಸನ್ನಿಧಾನದಲ್ಲಿ ಧರ್ಮದರ್ಶನ ಸಾಲು ಎಂಟು ಕಿಲೋಮೀಟರ್ ಮುಟ್ಟಿದೆ.
ಹಾಸನ, (ಅಕ್ಟೋಬರ್ 22): ರಾಜ್ಯದ ಪ್ರಸಿದ್ಧ ಹಾಸನಾಂಬೆ ದೇವಿಯ ದರ್ಶನೋತ್ಸವ ಅಂತಿಮ ಘಟ್ಟ ತಲುಪಿದ್ದು, ಅಮ್ಮನ ದರ್ಶನಕ್ಕೆ ಇಂದು(ಅಕ್ಟೋಬರ್ 22) ಕೊನೆ ದಿನವಾಗಿದೆ. ಹೀಗಾಗಿ ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಅಕ್ಟೋಬರ್ 10 ರಿಂದ ಹಾಸನಾಂಬೆ ದೇವಿ ದರ್ಶನ ಪ್ರಾರಂಭವಾದಾಗಿನಿಂದ ಅಕ್ಟೋಬರ್ 20ರವರೆಗೆ ಒಟ್ಟು 23 ಲಕ್ಷಕ್ಕೂ ಅಧಿಕ ಭಕ್ತರು ದೇವಿ ದರ್ಶನ ಪಡೆದುಕೊಂಡಿದ್ದಾರೆ. ಇತಿಹಾಸದಲ್ಲೇ ಇದೇ ಮೊದಲ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದಾರೆ ಎನ್ನುವ ದಾಖಲೆ ಸೃಷ್ಟಿಯಾಗಿದೆ.
ಇನ್ನು ಇಂದು ಹಾಸನಾಂಬೆ ದರ್ಶನಕ್ಕೆ ಇಂದು(ಅಕ್ಟೋಬರ್ 22) ಕೊನೆ ದಿನವಾಗಿದ್ದರಿಂದ ಭಕ್ತಸಾಗರವೇ ಹರಿದುಬರುತ್ತಿದ್ದು, ಸದ್ಯ ಸನ್ನಿಧಾನದಲ್ಲಿ ಧರ್ಮದರ್ಶನ ಸಾಲು ಎಂಟು ಕಿಲೋಮೀಟರ್ ಮುಟ್ಟಿದೆ.
Latest Videos

