ಹುಟ್ಟೂರು ಬ್ಯಾಡಗಿಹಾಳ್​ನ ತನ್ನ ಜಮೀನಲ್ಲಿ ಕುಖ್ಯಾತ ರೌಡಿಶೀಟರ್ ಬಾಗಪ್ಪ ಹರಿಜನ್ ಅಂತ್ಯಕ್ರಿಯೆ

ಅರುಣ್​ ಕುಮಾರ್​ ಬೆಳ್ಳಿ

Updated on: Feb 12, 2025 | 7:54 PM

ಬಾಗಪ್ಪ ಹರಿಜನ್ ಹುಟ್ಟೂರು ಬ್ಯಾಡಗಿಹಾಳ್ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿದೆ. ಅವನ ದೇಹ ಊರು ತಲುಪುವ ಮೊದಲು ಅಲ್ಲಿ ನೀರವ ಮೌನ ಅವರಿಸಿತ್ತು. ಅವನ ಮನೆಯ ಮುಂದೆ ಒಂದಷ್ಟು ಓಡಾಡಿಕೊಂಡಿದ್ದರಾದರೂ ಎಲ್ಲರ ಮುಖದಲ್ಲೂ ಪ್ರೇತಕಳೆ. ಬಾಗಪ್ಪ ಹರಿಜನ್ ಇಷ್ಟು ಬೇಗ ಸತ್ತಾನು, ದುರಂತ ಸಾವು ಕಂಡಾನು ಅಂತ ಪ್ರಾಯಶಃ ಅವರ್ಯಾರೂ ಭಾವಿಸಿರಲಿಲ್ಲ ಅನಿಸುತ್ತದೆ.

ವಿಜಯಪುರ: ನಿನ್ನೆ ರಾತ್ರಿ ವಿಜಯಪುರದಲ್ಲಿ ಹಂತಕರ ಮಾರಕಾಸ್ತ್ರಗಳಿಗೆ ಬಲಿಯಾದ ನಟೋರಿಯಸ್ ರೌಡಿಶೀಟರ್ ಬಾಗಪ್ಪ ಹರಿಜನ್ ಅಂತ್ಯಕ್ರಿಯೆ ಅವನ ಹುಟ್ಟೂರು ಬ್ಯಾಡಗಿಹಾಳದದಲ್ಲಿ ನಡೆಯಿತು. ಅಂತ್ಯಕ್ರಿಯೆಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದರು. ಹುಟ್ಟೂರಲ್ಲಿ ಬಾಗಪ್ಪ ಖರೀದಿಸಿದ ಜಮೀನಿನಲ್ಲೇ ಅಂತ್ಯಸಂಸ್ಕಾರಕ್ಕೆ ಏರ್ಪಾಟು ಮಾಡಲಾಗಿತ್ತು. ವಿಜಯಪುರದ ಬಿಎಲ್​ಡಿಈಎ ಮೆಡಿಕಲ್ ಕಾಲೇಜಿನ ಶವಾಗಾರದಿಂದ ಬಾಗಪ್ಪನ ಪಾರ್ಥೀವ ಶರೀರವನ್ನು ಅಂಬ್ಯುಲೆನ್ಸ್ ಒಂದರಲ್ಲಿ ಬ್ಯಾಡಗಿಹಾಳ್​ಗೆ ತರಲಾಯಿತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಬಾಗಪ್ಪ ಹರಿಜನ್ ಪ್ರೀತಿಸಿ ಮದುವೆಯಾಗಿದ್ದ, ಅದರೆ ಅವನ ಸಂಗಾತಿ ಬಹಳ ದಿನ ಬದುಕುಳಿಯಲಿಲ್ಲ: ಮಹಾಂತೇಶ್, ಪೊಲೀಸ್ ಆಧಿಕಾರಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.