ಸಿಎಂ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ರಿಯಾಕ್ಷನ್, ನವೆಂಬರ್ ಕ್ರಾಂತಿ ಆಗುತ್ತಾ?

Updated on: Nov 23, 2025 | 5:39 PM

ರಾಜ್ಯ ಕಾಂಗ್ರೆಸ್ ನಲ್ಲಿ (Karnataka Congress) ಈಗ ಸಿಎಂ ಕುರ್ಚಿ ಫೈಟ್ ಜೋರಾಗಿದೆ. ಸರ್ಕಾರಕ್ಕೆ ಎರಡುವರೆ ವರ್ಷ ತುಂಬಿಂದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸಿಡಿದೆದ್ದಿದ್ದು, ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದ್ದಾರೆ. ಇನ್ನು ಈ ಎಲ್ಲಾ ಬೆಳವಣಿಗೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು, ಹೇಳುವುದಕ್ಕೆ ನನ್ನ ಹತ್ತಿರ ಏನೂ ಇಲ್ಲ ಎಂದು ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, (ನವೆಂಬರ್ 23): ಸಿದ್ದರಾಮಯ್ಯ ಸರ್ಕಾರಕ್ಕೆ ಎರಡುವರೆ ವರ್ಷ ತುಂಬುತ್ತಿದ್ದಂತೆಯೇ ಕರ್ನಾಟಕ ಕಾಂಗ್ರೆಸ್​ನಲ್ಲಿ ಕುರ್ಚಿ ಕಾಳಗ ತೀವ್ರಗೊಂಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಬಣ ಸಿಡಿದೆದ್ದಿವೆ. ಎರಡು ಬಣದ ಕಡೆಯ ಶಾಸಕರು, ಸಚಿವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಕಡೆ ಪರೇಡ್ ನಡೆಸಿದ್ದಾರೆ. ಹೌದು…ಬೆಂಗಳೂರಿನಲ್ಲಿರುವ ಮಲ್ಲಿಕಾರ್ಜುನ ಖರ್ಗೆ ನಿವಾಸ ಪವರ್ ಸೆಂಟರ್ ಆಗಿದ್ದು, ಕಳೆದ 3 ದಿನಗಳಿಂದ ಬೆಂಗಳೂರಿನಲ್ಲಿರೋ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿವಾಸಕ್ಕೆ ಹಲವು ನಾಯಕರು ಭೇಟಿ ನೀಡಿ ಚರ್ಚಿಸುತ್ತಿದ್ದಾರೆ.ಸಿಎಂರಿಂದ ಹಿಡಿದು ಸಚಿವರು, ಶಾಸಕರಿಂದಲೂ ಪಕ್ಷದಲ್ಲಿನ ಬೆಳವಣಿಗೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇನ್ನು ಈ ಎಲ್ಲಾ ಬೆಳವಣಿಗೆ ಬಗ್ಗೆ ಕೊನೆಗೂ ಖರ್ಗೆ ಮೌನ ಮುರಿದಿದ್ದು, ಕರ್ನಾಟಕ ಕಾಂಗ್ರೆಸ್​​ನಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಬಗ್ಗೆ ಬಹಿರಂಗವಾಗಿಯೇ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಿದ್ದರಾಮಯ್ಯ- ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕಿತ್ತಾಟವನ್ನು ಬಗೆಹರಿಸಲು ತಮ್ಮಿಂದ ಆಗುವುದಿಲ್ಲ ಎಂದು ಪರೋಕ್ಷವಾಗಿ ಅಸಹಾಯಕತೆ ತೋಡಿಕೊಂಡಿದ್ದಾರೆ. ಹಾಗಾದ್ರೆ, ಖರ್ಗೆ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.

ಇದನ್ನೂ ಓದಿ: ಹೇಳುವುದಕ್ಕೆ ನನ್ನ ಹತ್ತಿರ ಏನೂ ಇಲ್ಲ: ಸಿಎಂ ಕುರ್ಚಿ ಕಿತ್ತಾಟಕ್ಕೆ ಅಸಹಾಯಕತೆ ಹೊರಹಾಕಿದ ಖರ್ಗೆ