ಅಕ್ರಮ ಗಣಿಗಾರಿಕೆ ವಿರುದ್ಧ ನಾವು ನಡೆಸಿದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Updated on: May 16, 2025 | 3:21 PM

ವಿಧಾನಸಭೆಗೆ 2023ರಲ್ಲಿ ನಡೆದ ಚುನಾವಣೆಯಲ್ಲಿ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ತನಗೆ ಪರೋಕ್ಷವಾಗಿ ಸಹಾಯ ಮಾಡಿದ್ದರು ಎಂದು ಜನಾರ್ಧನ ರೆಡ್ಡಿ ಹೇಳಿದ್ದು ಅಪ್ಪಟ ಸುಳ್ಳು ಎಂದ ಸಿಎಂ, ರೆಡ್ಡಿ ಬಿಜೆಪಿ ಸೇರಿದ್ದು ಎಲ್ಲರಿಗೂ ಗೊತ್ತಿದೆ, ನನ್ನ 50 ವರ್ಷಗಳ ರಾಜಕೀಯ ಬದುಕಿನಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್ ಅನ್ನು ವಿರೋಧ ಮಾಡಿದಷ್ಟು ಬೇರೆ ಯಾರನ್ನೂ ಮಾಡಿಲ್ಲ ಎಂದು ಹೇಳಿದರು.

ಕೊಪ್ಪಳ, ಮೇ 16: ಪ್ರಜಾಪ್ರಭುತ್ವ ವ್ವವಸ್ಥೆಯಲ್ಲಿ ಟೀಕೆಗಳು ಸಾಮಾನ್ಯ, ಅವುಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿಯವರು (Gali Janardhan Reddy) ದೋಷಿಯೆಂದು ಪರಿಗಣಿಸಿ ಸೆರೆವಾಸದ ಶಿಕ್ಷೆ ನೀಡಿದೆ, ಚುನಾವಣಾ ಆಯೋಗ ಉಪ ಚುನಾವಣೆ ನಡೆಸಬೇಕೆಂದು ಹೇಳಿದರೆ ಚುನಾವಣೆ ಮಾಡುತ್ತೇವೆ ಮತ್ತು ಉಪ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತಾಡಿದ ಅವರು, ಗಂಗಾವತಿ ಉಪ ಚುನಾವಣೆಗೆ ಅಭ್ಯರ್ಥಿ ಯಾರೆಂದು ಪಕ್ಷ ನಿರ್ಧರಿಸುತ್ತದೆ ಎಂದು ಹೇಳಿ ಅಕ್ರಮ ಗಣಿಗಾರಿಕೆ ವಿರುದ್ಧ ನಡೆಸಿದ ಹೋರಾಟ ಮತ್ತು ಬೆಂಗಳೂರು-ಬಳ್ಳಾರಿ ಪಾದಯಾತ್ರೆಯನ್ನು ವಿವರಿಸಿದರು.

ಇದನ್ನೂ ಓದಿ:   ಸಿದ್ದರಾಮಯ್ಯರನ್ನು ಯಾರೇನೂ ಮಾಡಕ್ಕಾಗಲ್ಲ, ಕರ್ನಾಟಕದ ಜನತೆ ಅವರೊಂದಿಗಿದೆ: ಬೈರತಿ ಸುರೇಶ್, ಸಚಿವ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ