ರೈಲಿನಲ್ಲಿ ಸಹಪ್ರಯಾಣಿಕರೊಂದಿಗೆ ಆತ್ಮೀಯವಾಗಿ ಹರಟಿದರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 27, 2022 | 12:18 PM

ಈ ಸಂದರ್ಭದಲ್ಲಿ ಅವರು ತಮ್ಮ ಕಂಪಾರ್ಟ್ ಮೆಂಟ್ ನಲ್ಲಿದ್ದ ಸಹಪ್ರಯಾಣಿಕರ ಜೊತೆ ಆತ್ಮೀಯ ಮಾತುಕತೆ ನಡೆಸಿದ್ದಾರೆ ಮತ್ತು ಅವರಿಗೆ ಸೆಲ್ಫೀಗಳನ್ನು ತೆಗೆದುಕೊಳ್ಳಲು ಅವಕಾಶ ನೀಡಿದ್ದಾರೆ

ಸಂಸತ್ತಿನಲ್ಲಿ ಬಹಳ ಖಡಕ್ಕಾಗಿ ಮಾತಾಡುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಹೊರಗಡೆ ಮಾತ್ರ ಭಾರೀ ಸ್ನೇಹಜೀವಿ. ಮೊನ್ನೆ ಅವರು ಮುಂಬೈಯಿಂದ (Mumbai) ರಾಯಚೂರಿಗೆ (Raichur) ರೈಲಿನಲ್ಲಿ ಪ್ರಯಾಣಸಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಕಂಪಾರ್ಟ್ ಮೆಂಟ್ ನಲ್ಲಿದ್ದ ಸಹಪ್ರಯಾಣಿಕರ ಜೊತೆ ಆತ್ಮೀಯ ಮಾತುಕತೆ ನಡೆಸಿದ್ದಾರೆ ಮತ್ತು ಅವರಿಗೆ ಸೆಲ್ಫೀಗಳನ್ನು ತೆಗೆದುಕೊಳ್ಳಲು ಅವಕಾಶ ನೀಡಿದ್ದಾರೆ. ಪ್ರಯಾಣದ ಬಳಿಕ ಅವರು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.