MLC 2025: 19 ಸಿಕ್ಸರ್, 151 ರನ್..! ಮಾಜಿ ಆರ್ಸಿಬಿ ಆಟಗಾರನ ಅಬ್ಬರ ಹೇಗಿತ್ತು ನೀವೇ ನೋಡಿ
Finn Allen's Record-Breaking 151: 2025ರ ಮೇಜರ್ ಲೀಗ್ ಕ್ರಿಕೆಟ್ ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲೆಂಡ್‌ನ ಫಿನ್ ಅಲೆನ್ ಅವರು ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕೇವಲ 51 ಎಸೆತಗಳಲ್ಲಿ 151 ರನ್ ಗಳಿಸಿ, 296 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್‌ನೊಂದಿಗೆ ವೈಭವ್ ಸೂರ್ಯವಂಶಿ, ಕ್ರಿಸ್ ಗೇಲ್ ಮತ್ತು ನಿಕೋಲಸ್ ಪೂರನ್ ಅವರ ದಾಖಲೆಗಳನ್ನು ಮುರಿದರು. 34 ಎಸೆತಗಳಲ್ಲಿ ಶತಕ ಪೂರ್ಣಗೊಳಿಸಿದ ಅವರು 2025ರ ಐಪಿಎಲ್‌ನಲ್ಲಿ ವೈಭವ್ ಸೂರ್ಯವಂಶಿ ಸ್ಥಾಪಿಸಿದ್ದ ದಾಖಲೆಯನ್ನೂ ಮೀರಿಸಿದರು.
2025 ರ ಮೇಜರ್ ಲೀಗ್ ಕ್ರಿಕೆಟ್ಗೆ ಭರ್ಜರಿ ಆರಂಭ ಸಿಕ್ಕಿದೆ. ಉದ್ಘಾಟನಾ ಪಂದ್ಯದಲ್ಲೇ ನ್ಯೂಜಿಲೆಂಡ್‌ನ 26 ವರ್ಷದ ಬ್ಯಾಟ್ಸ್‌ಮನ್ ಫಿನ್ ಅಲೆನ್ ಸಿಡಿಲಬ್ಬರದ ಬ್ಯಾಟಿಂಗ್ ಮಾಡುವ ಮೂಲಕ ಒಂದೇ ಇನ್ನಿಂಗ್ಸ್ನಲ್ಲಿ ವೈಭವ್ ಸೂರ್ಯವಂಶಿ, ಕ್ರಿಸ್ ಗೇಲ್ ಮತ್ತು ನಿಕೋಲಸ್ ಪೂರನ್ ಅವರ ದಾಖಲೆಗಳನ್ನು ಪುಡಿಗಟ್ಟಿದ್ದಾರೆ. ಮೇಜರ್ ಲೀಗ್ ಕ್ರಿಕೆಟ್ನ ಮೊದಲ ಪಂದ್ಯವು ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ ಮತ್ತು ವಾಷಿಂಗ್ಟನ್ ಫ್ರೀಡಂ ನಡುವೆ ನಡೆಯಿತು. ಈ ಪಂದ್ಯದಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ ಪರ ಆಡುತ್ತಿರುವ ಫಿನ್ ಅಲೆನ್ ಕೇವಲ 51 ಎಸೆತಗಳನ್ನು ಎದುರಿಸಿ 296 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ 151 ರನ್ ಗಳಿಸಿದರು, ಇದರಲ್ಲಿ 19 ಸಿಕ್ಸರ್‌ಗಳು ಸೇರಿದ್ದವು. ಕೇವಲ 34 ಎಸೆತಗಳಲ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸಿದ ಅಲೆನ್ 2025 ರ ಐಪಿಎಲ್‌ನಲ್ಲಿ 35 ಎಸೆತಗಳಲ್ಲಿ ಶತಕ ಬಾರಿಸಿದ್ದ ವೈಭವ್ ಸೂರ್ಯವಂಶಿ ಅವರ ದಾಖಲೆಯನ್ನು ಮುರಿದರು.