ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ: ಬೆಳಗಾವಿಯ ಬಿಜೆಪಿ ಮುಖಂಡ ಸೇರಿ 25 ಜನರ ವಿರುದ್ಧ FIR

Edited By:

Updated on: Oct 01, 2026 | 5:34 PM

ಬೆಳಗಾವಿಯಲ್ಲಿ ಅಲ್ಪಸಂಖ್ಯಾತ ಮತದಾರರ ಹೆಸರು ಡಿಲೀಟ್‌ ಆಗಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬಿಜೆಪಿ ಮುಖಂಡ ರವಿ ಪಾಟೀಲ್ ಸೇರಿ 25 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೋಗಸ್ ಫಾರ್ಮ್ ಬಳಸಿ ಹೆಸರುಗಳನ್ನು ಅಕ್ರಮವಾಗಿ ಡಿಲೀಟ್ ಮಾಡಲಾಗಿದೆ ಎಂದು ವಾರ್ಡ್ 12ರ ಬಿಎಲ್ಓ ದೂರು ನೀಡಿದ್ದು, ಘಟನೆ ನಡೆದು ಎಂಟು ದಿನಗಳ ಬಳಿಕ ದೂರು ದಾಖಲಿಸಲಾಗಿದೆ.

ಬೆಳಗಾವಿ, ಅಕ್ಟೋಬರ್​​ 01: ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ ಸಂಬಂಧ ಬೆಳಗಾವಿಯಲ್ಲಿ ಬಿಜೆಪಿ ಮುಖಂಡ ರವಿ ಪಾಟೀಲ್ ಸೇರಿ 25 ಜನರ ವಿರುದ್ಧ FIR ದಾಖಲಾಗಿದೆ. ಮಾರ್ಕೆಟ್ ಠಾಣೆಗೆ ವಾರ್ಡ್ 12ರ ಬಿಎಲ್ಒ ದೂರಿನ ಅನ್ವಯ ಡಾ.ರವಿ ಪಾಟೀಲ್, ವಿಜಯ ಆಸ್ಪತ್ರೆ ಸಿಬ್ಬಂದಿ ಪ್ರಶಾಂತ್ ಮುಂದಿನಮನಿ, ಶಂಕರ್ ನಾಯಕ್ ಸೇರಿದಂತೆ ಹಲವರ ವಿರುದ್ಧ ಕೇಸ್​​ ದಾಖಲಾಗಿದೆ. 198 ಮುಸ್ಲಿಂ ಮತದಾರರ ಗುರಿಯಾಗಿಸಿ ಡಿಲೀಟ್ ಮಾಡುವ ಒಳ ಸಂಚು ಮತ್ತು ನಕಲಿ ದಾಖಲಾತಿ, ಸುಳ್ಳು ಮಾಹಿತಿ ನೀಡಿದ ಆರೋಪ ಇವರ ವಿರುದ್ಧ ಕೇಳಿಬಂದಿದೆ. ಸೆ.22ರಂದು ವೀರಭದ್ರನಗರದ ಮತಗಟ್ಟೆ 195, 196ರಲ್ಲಿ ಜೀವಂತವಾಗಿರುವ ಹಾಗೂ ಕಾನೂನುಬದ್ಧ ಇರುವ ಮತದಾರರ ಹೆಸರು ಡಿಲೀಟ್ ಮಾಡಿಸಲು ಆರೋಪಿಗಳು ಯತ್ನಿಸಿದ್ದಾರೆ ಎನ್ನಲಾಗಿದ್ದು, ಈ ವೇಳೆ ರವಿ ಪಾಟೀಲ್​​ ಸೇರಿ ಮೂವರನ್ನು ಸ್ಥಳೀಯರು ಹಿಡಿದಿದ್ದರು. ಫಾರ್ಮ್​ ನಂ.7ರ ಮೂಲಕ ಡಿಲೀಟ್ ಮಾಡಿಸಲು ಯತ್ನ ಆರೋಪ ಸಂಬಂಧ ಘಟನೆ ನಡೆದು ಎಂಟು ದಿನಗಳ ಬಳಿಕ ಎಫ್ಐಆರ್ ದಾಖಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More