ಮುಡಾ ಕೇಸ್​ನಲ್ಲಿ ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು

ಮುಡಾ ಕೇಸ್​ನಲ್ಲಿ ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು

ಕಿರಣ್ ಹನುಮಂತ್​ ಮಾದಾರ್
|

Updated on: Sep 27, 2024 | 7:44 PM

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್​ಐಆರ್ ದಾಖಲಾಗಿದೆ. ಇದರ ಬೆನ್ನಲ್ಲೇ ರೊಚ್ಚಿಗೆದ್ದಿರುವ ಸಿದ್ದು ಬೆಂಬಲಿಗರು, ಇಂದು(ಸೆ.27) ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಪಂಜು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು, ಸೆ.27: ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮೈಸೂರು ಲೋಕಾಯುಕ್ತ ಎಸ್​ಪಿ ಕಚೇರಿಯಲ್ಲಿ ಎಫ್​​ಐಆರ್ ದಾಖಲಾಗಿದೆ. ಈ ಹಿನ್ನಲೆ ಸಿಎಂ ತವರು ಜಿಲ್ಲೆಯಲ್ಲಿ ನಗರಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಹೌದು, ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು  ಪಂಜು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ