ಚಿಕ್ಕಮಗಳೂರು: ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್ಐಆರ್
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಮಸೀದಿ ಮುಂದೆ ಪಟಾಕಿ ಸಿಡಿಸಿ ಡ್ಯಾನ್ಸ್ ಮಾಡಿದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದಕ್ಕೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಚಿಕ್ಕಮಗಳೂರು, ಸೆಪ್ಟೆಂಬರ್ 13: ಮಸೀದಿ ಮುಂಭಾಗ ಪಟಾಕಿ ಸಿಡಿಸಿದ್ದಕ್ಕೆ 25 ಹಿಂದೂ (Hindu) ಕಾರ್ಯಕರ್ತರ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ (Sringeri Police Station) ಎಫ್ಐಆರ್ ದಾಖಲಾಗಿದೆ. ಶೃಂಗೇರಿ ಪಟ್ಟಣದ ಕಾಂಚಿನಗರದಲ್ಲಿ ಗಣೇಶ ಪ್ರತಿಷ್ಠಾಪಿಸಲಾಗಿತ್ತು. ಗುರುವಾರ ರಾತ್ರಿ ವಿಸರ್ಜನಾ ಮೆರವಣಿಗೆ ನಡೆದಿತ್ತು. ಮೆರವಣಿಗೆ ಶೃಂಗೇರಿ ಪಟ್ಟಣದ ವೆಲ್ಕಮ್ ಗೇಟ್ ಸರ್ಕಲ್ಗೆ ಬಂದಿದೆ. ಸರ್ಕಲ್ನಲ್ಲಿದ್ದ ಮಸೀದಿ ಎದುರುಗಡೆ ಹಿಂದೂ ಕಾರ್ಯಕರ್ತರು ಪಟಾಕಿ ಸಿಡಿಸಿ ಡ್ಯಾನ್ಸ್ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಶಾಂತಿ ಭಂಗ, ಭಯದ ವಾತಾವರಣ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದಕ್ಕೆ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದವು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

