ಚಿಕ್ಕಮಗಳೂರು: ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್​

| Updated By: ವಿವೇಕ ಬಿರಾದಾರ

Updated on: Sep 13, 2024 | 2:35 PM

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಮಸೀದಿ ಮುಂದೆ ಪಟಾಕಿ ಸಿಡಿಸಿ ಡ್ಯಾನ್ಸ್​​ ಮಾಡಿದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಇದಕ್ಕೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಚಿಕ್ಕಮಗಳೂರು, ಸೆಪ್ಟೆಂಬರ್​ 13: ಮಸೀದಿ ಮುಂಭಾಗ ಪಟಾಕಿ ಸಿಡಿಸಿದ್ದಕ್ಕೆ 25 ಹಿಂದೂ (Hindu) ಕಾರ್ಯಕರ್ತರ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ (Sringeri Police Station) ಎಫ್​ಐಆರ್​ ದಾಖಲಾಗಿದೆ. ಶೃಂಗೇರಿ ಪಟ್ಟಣದ ಕಾಂಚಿನಗರದಲ್ಲಿ ಗಣೇಶ ಪ್ರತಿಷ್ಠಾಪಿಸಲಾಗಿತ್ತು. ಗುರುವಾರ ರಾತ್ರಿ ವಿಸರ್ಜನಾ ಮೆರವಣಿಗೆ ನಡೆದಿತ್ತು. ಮೆರವಣಿಗೆ ಶೃಂಗೇರಿ ಪಟ್ಟಣದ ವೆಲ್ಕಮ್ ಗೇಟ್ ಸರ್ಕಲ್​ಗೆ ಬಂದಿದೆ. ಸರ್ಕಲ್​​ನಲ್ಲಿದ್ದ ಮಸೀದಿ ಎದುರುಗಡೆ ಹಿಂದೂ ಕಾರ್ಯಕರ್ತರು ಪಟಾಕಿ ಸಿಡಿಸಿ ಡ್ಯಾನ್ಸ್​ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ​ ಶಾಂತಿ ಭಂಗ, ಭಯದ ವಾತಾವರಣ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದಕ್ಕೆ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:33 pm, Fri, 13 September 24

Follow us on