ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು: ಬಾಗಲಕೋಟೆ ಎಸ್ಪಿ ಹೇಳಿದ್ದಿಷ್ಟು
ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಟಿಪ್ಪು ಸುಲ್ತಾನ್, ಔರಂಗಜೇಬ್ ಕುರಿತು ಅಶ್ಲೀಲ ಪದ ಬಳಕೆ ಹಿನ್ನಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆ ಜಿಲ್ಲೆಯ ಮುಧೋಳ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮುಧೋಳ ಠಾಣೆ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಎಸ್ಪಿ ಅಮರನಾಥರೆಡ್ಡಿ ಹೇಳಿದ್ದಿಷ್ಟು.
ಬಾಗಲಕೋಟೆ, ಸೆಪ್ಟೆಂಬರ್ 20: ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಹಿನ್ನಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ವಿರುದ್ಧ ಜಿಲ್ಲೆಯ ಮುಧೋಳ ಠಾಣೆಯಲ್ಲಿ ಸೆಕ್ಷನ್ 264/24, 16(1)a, 353(2)BNS ಅಡಿ ಎಫ್ಐಆರ್ ದಾಖಲಾಗಿದೆ. ಮುಧೋಳ ಠಾಣೆ ಪೊಲೀಸರು ಸ್ವಯಂ ದೂರು ದಾಖಲಿಸಿದ್ದಾರೆ. ನಿನ್ನೆ ಜನತಾರಾಜ್ ಗಣೇಶ ವಿಸರ್ಜನೆ ವೇಳೆ ಯತ್ನಾಳ್ ಭಾಷಣ ಮಾಡಿದ್ದು, ಟಿಪ್ಪು ಸುಲ್ತಾನ್, ಔರಂಗಜೇಬ್ ಕುರಿತು ಅಶ್ಲೀಲ ಪದ ಬಳಕೆ ಮಾಡಿದ್ದರು. ಈ ಬಗ್ಗೆ ಬಾಗಲಕೋಟೆ ಎಸ್ಪಿ ಅಮರನಾಥರೆಡ್ಡಿ ಹೇಳಿದ್ದಿಷ್ಟು. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.