ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು

Edited By:

Updated on: Sep 20, 2024 | 9:54 PM

ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಟಿಪ್ಪು ಸುಲ್ತಾನ್, ಔರಂಗಜೇಬ್ ಕುರಿತು ಅಶ್ಲೀಲ ಪದ‌ ಬಳಕೆ ಹಿನ್ನಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆ ಜಿಲ್ಲೆಯ ಮುಧೋಳ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮುಧೋಳ ಠಾಣೆ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಎಸ್​ಪಿ ಅಮರನಾಥರೆಡ್ಡಿ ಹೇಳಿದ್ದಿಷ್ಟು.

ಬಾಗಲಕೋಟೆ, ಸೆಪ್ಟೆಂಬರ್ 20: ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಹಿನ್ನಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ವಿರುದ್ಧ ಜಿಲ್ಲೆಯ ಮುಧೋಳ ಠಾಣೆಯಲ್ಲಿ ಸೆಕ್ಷನ್ 264/24, 16(1)a, 353(2)BNS ಅಡಿ ಎಫ್​ಐಆರ್ ದಾಖಲಾಗಿದೆ. ಮುಧೋಳ ಠಾಣೆ ಪೊಲೀಸರು ಸ್ವಯಂ ದೂರು ದಾಖಲಿಸಿದ್ದಾರೆ. ನಿನ್ನೆ ಜನತಾರಾಜ್ ಗಣೇಶ ವಿಸರ್ಜನೆ ವೇಳೆ ಯತ್ನಾಳ್ ಭಾಷಣ ಮಾಡಿದ್ದು, ಟಿಪ್ಪು ಸುಲ್ತಾನ್, ಔರಂಗಜೇಬ್ ಕುರಿತು ಅಶ್ಲೀಲ ಪದ‌ ಬಳಕೆ ಮಾಡಿದ್ದರು. ಈ ಬಗ್ಗೆ ಬಾಗಲಕೋಟೆ ಎಸ್​ಪಿ ಅಮರನಾಥರೆಡ್ಡಿ ಹೇಳಿದ್ದಿಷ್ಟು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More