AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ

ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ

ಶಿವಕುಮಾರ್ ಪತ್ತಾರ್
| Edited By: |

Updated on: Sep 27, 2026 | 8:50 PM

Share

ವಿಶ್ವವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ಕೊಪ್ಪಳ ಅಭಿನವ ಗವಿಸಿದ್ದೇಶ್ವರ ಅವರು ಉದ್ಘಾಟಿಸಲಿದ್ದಾರೆ ಎಂದು ಸ್ವತಃ ಸಿಎಂ ಡಿಕೆ ಶಿವಕುಮಾರ್ ಅವರು ಘೋಷಣೆ ಮಾಡಿದ್ದರು. ಆದ್ರೆ, ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿಯವರು ದಸರಾ ಉದ್ಘಾಟನೆಯನ್ನು ತಿರಸ್ಕರಿಸಿದ್ದಾರೆ ಎಂಬ ಸುದ್ದಿ ಭಾರೀ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಎಚ್ಚೆತ್ತ ಕೊಪ್ಪಳ ಪೊಲೀಸರು ಸುಳ್ಳು ಸುದ್ದಿ ಹರಡಿದ 'ಜನತಾ ಟಿವಿ ಡಿಜಿಟಲ್' ವಿರುದ್ಧ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ.

ಕೊಪ್ಪಳ, (ಸೆಪ್ಟೆಂಬರ್ 27): ವಿಶ್ವವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ಕೊಪ್ಪಳ ಅಭಿನವ ಗವಿಸಿದ್ದೇಶ್ವರ ಅವರು ಉದ್ಘಾಟಿಸಲಿದ್ದಾರೆ ಎಂದು ಸ್ವತಃ ಸಿಎಂ ಡಿಕೆ ಶಿವಕುಮಾರ್ ಅವರು ಘೋಷಣೆ ಮಾಡಿದ್ದರು. ಆದ್ರೆ, ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿಯವರು ದಸರಾ ಉದ್ಘಾಟನೆಯನ್ನು ತಿರಸ್ಕರಿಸಿದ್ದಾರೆ ಎಂಬ ಸುದ್ದಿ ಭಾರೀ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಎಚ್ಚೆತ್ತ ಕೊಪ್ಪಳ ಪೊಲೀಸರು ಸುಳ್ಳು ಸುದ್ದಿ ಹರಡಿದ ‘ಜನತಾ ಟಿವಿ ಡಿಜಿಟಲ್’ ವಿರುದ್ಧ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ. ಇನ್ನು ಈ ಬಗ್ಗೆ ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಕ್ರಿಯಿಸಿ, ಸೋಶಿಯಲ್ ಮೀಡಿಯಾನಲ್ಲಿ ಈ ರೀತಿ ಸುಳ್ಳು ಸುದ್ದಿ ಹಬ್ಬಿಸುವವರಿಗೆ ಖಡಕ್ ಎಚ್ಚರಿಕೆ ಸಂದೇಶ ಕೊಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More