ಚಿಕ್ಕಮಗಳೂರು: ಮುಳ್ಳಯ್ಯನಗಿರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಮೆಸ್ಕಾಂ‌ ಸಿಬ್ಬಂದಿ ವಿರುದ್ಧ ಎಫ್​ಐಆರ್​

ಚಿಕ್ಕಮಗಳೂರು: ಮುಳ್ಳಯ್ಯನಗಿರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಮೆಸ್ಕಾಂ‌ ಸಿಬ್ಬಂದಿ ವಿರುದ್ಧ ಎಫ್​ಐಆರ್​

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ

Updated on:Nov 14, 2024 | 10:07 AM

ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿಯಲ್ಲಿ ಎಣ್ಣಿ ಪಾರ್ಟಿ ಮಾಡಿದ್ದ ಮೆಸ್ಕಾಂ ಸಿಬ್ಬಂದಿ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಬೆಂಗಳೂರು ಮೂಲದ ಮೆಸ್ಕಾಂ‌ ಸಿಬ್ಬಂದಿ ಚಿದಾನಂದ ತನ್ನ ಆರು ಜನ ಸ್ನೇಹಿತರೊಂದಿಗೆ ಸೇರಿ ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾನೆ. ಪ್ರಶ್ನಿಸಿದ್ದಕ್ಕೆ ಸ್ಥಳೀಯರಿಗೆ ದಮ್ಕಿ ಹಾಕಿದ್ದಾನೆ.

ಚಿಕ್ಕಮಗಳೂರು, ನವೆಂಬರ್​ 14: ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಮೆಸ್ಕಾಂ ಸಿಬ್ಬಂದಿ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಬೆಂಗಳೂರು ಮೂಲದ ಮೆಸ್ಕಾಂ‌ ಸಿಬ್ಬಂದಿ ಚಿದಾನಂದ ತನ್ನ ಆರು ಜನ ಸ್ನೇಹಿತರೊಂದಿಗೆ ಮುಳ್ಳಯ್ಯನಗಿರಿ ಪ್ರವಾಸಕ್ಕೆ ಬಂದಿದ್ದನು. ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಮದ್ಯ ಸೇವಿಸಿ ನೂರಾರು ಪ್ರವಾಸಿಗರೆದುರು ಗಲಾಟೆ ಮಾಡುತ್ತಿದ್ದನು. ಮದ್ಯ ಸೇವಿಸದಂತೆ ಹೇಳಿದ್ದಕ್ಕೆ ಪ್ರವಾಸಿಗರಿಗೆ ಧಮ್ಕಿ ಹಾಕಿದ್ದನು. ವಿಚಾರ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆತನ ಕಾರನ್ನು ಪರಿಶೀಲಿಸಿದಾಗ ಮದ್ಯದ ಬಾಟಲಿಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಮೆಸ್ಕಾಂ ಸಿಬ್ಬಂದಿ ಚಿದಾನಂದ ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಹಾಗೇ ಮೆಸ್ಕಾಂ ಸಿಬ್ಬಂದಿ ಚಿದಾನಂದನ ಕಾರು ಸೀಜ್​ ಮಾಡಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Nov 14, 2024 08:46 AM