AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತೆಯ ಖಾಸಗಿ ವೀಡಿಯೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್​ಗೆ ಪ್ರಚೋದನೆ; ಕಿರುತೆರೆ ನಟಿ ಮೇಲೆ ಕೇಸ್

ಸ್ನೇಹಿತೆಯ ಖಾಸಗಿ ವೀಡಿಯೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್​ಗೆ ಪ್ರಚೋದನೆ; ಕಿರುತೆರೆ ನಟಿ ಮೇಲೆ ಕೇಸ್

ರಾಜೇಶ್ ದುಗ್ಗುಮನೆ
|

Updated on: Oct 25, 2025 | 12:18 PM

Share

ಪಾರ್ವತಿ ತಾವು ಕೆಲಸ ಮಾಡುತ್ತಿದ್ದ ಕಂಪನಿ ಮಾಲೀಕರ ಜೊತೆಯೇ ಮದುವೆ ಆಗಿದ್ದರು. ಪತಿಗೆ ಬ್ಲ್ಯಾಕ್​​ಮೇಲ್​ ಮಾಡಲು ಪಾರ್ವತಿಗೆ ಆಶಾ ಬಲವಂತೆ ಮಾಡಿದ್ದರಂತೆ. ಜೊತೆಗೆ 2 ಕೋಟಿ ಹಣಕ್ಕೆ ಬ್ಲ್ಯಾಕ್​ಮೇಲ್​ ಮಾಡುವಂತೆ ಒತ್ತಡ ಹೇರಿದ್ದರು ಎನ್ನಲಾಗಿದೆ. ಇದಕ್ಕೆ ಪಾರ್ವತಿ ಒಪ್ಪದಿದ್ದಕ್ಕೆ ಖಾಸಗಿ ವಿಡಿಯೋಗಳು, ವಾಯ್ಸ್ ರೆಕಾರ್ಡ್ ಹಾಗೂ ಖಾಸಗಿ ಫೋಟೋಗಳನ್ನ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ.

ಸ್ನೇಹಿತೆಯ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್​ಗೆ ಪ್ರಚೋದನೆ ನೀಡಿದ ಆರೋಪದಡಿ ಕಿರುತೆರೆ ನಟಿ ಆಶಾ ಜೋಯಿಸ್ ವಿರುದ್ಧ ಕೇಸ್ ದಾಖಲಾಗಿದೆ. 2 ಕೋಟಿ ರೂಪಾಯಿಗೆ ಬ್ಲ್ಯಾಕ್​ಮೇಲ್​ ಮಾಡಲು ಪ್ರಚೋದನೆ ನೀಡಿದ ಆರೋಪ ಅವರ ಮೇಲೆ ಇದೆ. 61 ವರ್ಷದ ಪಾರ್ವತಿ ಎಂಬುವವರ ದೂರಿನನ್ವಯ ಎಫ್​ಐಆರ್ ದಾಖಲಾಗಿದೆ.

ಆಶಾ ಅವರು ಸೀರಿಯಲ್ ನಟಿ ಎಂದು ಪಾರ್ವತಿ ಬಳಿ ಪರಿಚಯ ಮಾಡಿಕೊಂಡಿದ್ದರು. ಪಾರ್ವತಿ ತಾವು ಕೆಲಸ ಮಾಡುತ್ತಿದ್ದ ಕಂಪನಿ ಮಾಲೀಕರ ಜೊತೆಯೇ ಮದುವೆ ಆಗಿದ್ದರು. ಪತಿಗೆ ಬ್ಲ್ಯಾಕ್​​ಮೇಲ್​ ಮಾಡಲು ಪಾರ್ವತಿಗೆ ಆಶಾ ಬಲವಂತೆ ಮಾಡಿದ್ದರಂತೆ. ಜೊತೆಗೆ 2 ಕೋಟಿ ಹಣಕ್ಕೆ ಬ್ಲ್ಯಾಕ್​ಮೇಲ್​ ಮಾಡುವಂತೆ ಒತ್ತಡ ಹೇರಿದ್ದರು ಎನ್ನಲಾಗಿದೆ. ಇದಕ್ಕೆ ಪಾರ್ವತಿ ಒಪ್ಪದಿದ್ದಕ್ಕೆ ಖಾಸಗಿ ವಿಡಿಯೋಗಳು, ವಾಯ್ಸ್ ರೆಕಾರ್ಡ್ ಹಾಗೂ ಖಾಸಗಿ ಫೋಟೋಗಳನ್ನ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ.

ಆದರೆ, ಪಾರ್ವತಿ ಈ ಬೆದರಿಕೆಗೆ ಹೆದರಿಲ್ಲ. ನಂತರ ವಿಡಿಯೋ ಹಾಗೂ ಫೋಟೋಗಳನ್ನು ಪಾರ್ವತಿ ತಮ್ಮ ಪರಿಚಯ ಇರುವ ವ್ಯಕ್ತಿಗಳಿಗೆ ಕಳಿಸಿದ್ದರಂತೆ. ಈ ಹಿನ್ನಲೆಯಲ್ಲಿ ತನ್ನ ಘನತೆಗೆ ಕುಂದುಂಟಾಗಿದೆ ಹಾಗು ತನ್ನ ಖಾಸಗಿ ಡೇಟಾವನ್ನ ಕದ್ದಿದ್ದಾರೆಂದು ಆರೋಪಿಸಿ ಪಾರ್ವತಿ ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.