ಕಾರಿನ ಟಾಪ್ ಮೇಲೆ ಕುಳಿತು ಹುಚ್ಚಾಟ: ಸ್ವಲ್ಪ ಹೆಚ್ಚು ಕಡಿಮೆ ಆದ್ರು ಯಮನಪಾದ

Edited By:

Updated on: Apr 06, 2025 | 1:28 PM

ದಕ್ಷಿಣ ಕನ್ನಡದಲ್ಲಿ ಕಾರಿನ ಟಾಪ್ ಮೇಲೆ ಕುಳಿತು ಯುವಕರು ಹುಚ್ಚಾಟ ಮೆರೆದಿದ್ದಾರೆ. ಸುಳ್ಯ ತಾಲೂಕಿ ಸಂಪಾಜಿ-ಸುಳ್ಯ ರಸ್ತೆಯಲ್ಲಿ, ಕಾರಿನಲ್ಲಿ 7 ಜನ ಪ್ರಯಾಣಿಸಿದ್ದಾರೆ. ಕಾರು ವೇಗವಾಗಿ ಚಲಿಸುತ್ತಿರುವಾಗಲೇ ಯುವಕರು ಸನ್ ರೂಫ್ ಮತ್ತು ಕಿಟಿಕಿಯಿಂದ ಹೊರಬಂದು ಡ್ಯಾನ್ಸ್ ಮಾಡುತ್ತಾ ರಸ್ತೆಯಲ್ಲೇ ಅಟ್ಟಹಾಸ ಮೆರೆದಿದ್ದಾರೆ.

ಮಂಗಳೂರು, (ಏಪ್ರಿಲ್ 06): ದಕ್ಷಿಣ ಕನ್ನಡದಲ್ಲಿ(Dakhsina Kannada) ಕಾರಿನ ಟಾಪ್ ಮೇಲೆ ಕುಳಿತು ಯುವಕರು(Y0uths) ಹುಚ್ಚಾಟ ಮೆರೆದಿದ್ದಾರೆ. ಸುಳ್ಯ ತಾಲೂಕಿ ಸಂಪಾಜಿ-ಸುಳ್ಯ ರಸ್ತೆಯಲ್ಲಿ, ಕಾರಿನಲ್ಲಿ(Car)  7 ಜನ ಪ್ರಯಾಣಿಸಿದ್ದಾರೆ. ಕಾರು ವೇಗವಾಗಿ ಚಲಿಸುತ್ತಿರುವಾಗಲೇ ಯುವಕರು ಸನ್ ರೂಫ್ ಮತ್ತು ಕಿಟಿಕಿಯಿಂದ ಹೊರಬಂದು ಡ್ಯಾನ್ಸ್ ಮಾಡುತ್ತಾ ರಸ್ತೆಯಲ್ಲೇ ಅಟ್ಟಹಾಸ ಮೆರೆದಿದ್ದಾರೆ.

KA09 MG5880 ನಂಬರಿನ ಕ್ರೆಟಾ ಕಾರಿನಲ್ಲಿ ಒಟ್ಟು ಏಳು ಜನ ಪ್ರಯಾಣ ಮಾಡಿದ್ದು, ಕಾರು ಅತೀ ವೇಗವಾಗಿ ಹೋಗುತ್ತಿರುವಾಗಲೇ ಸನ್ ರೂಫ್ ಮತ್ತು ಕಿಟಿಕಿಯಿಂದ ಹೊರಬಂದು ಡ್ಯಾನ್ಸ್ ಮಾಡುತ್ತಾ ಪುಂಡಾಟ ಮಾಡಿದ್ದು, ಇದನ್ನು ಮತ್ತೊಂದು ವಾಹನ ಸವಾರರು ವಿಡಿಯೋ ಮಾಡಿದ್ದು, ವಿಡಿಯೋ ಫುಲ್ ವೈರಲ್ ಆಗಿದೆ. ಈ ವಿಡಿಯೋ ನೋಡಿದ್ರೆ ಮೈ ಜುಮ್​ ಎನ್ನಿಸಿತ್ತು. ಸ್ವಲ್ಪ ಹೆಚ್ವು ಕಡಿಮೆ ಆದ್ರೂ ಯಮನಪಾದ ಗ್ಯಾರಂಟಿ. ಈ ಸಂಬಂಧ ಸುಳ್ಯ ಪೊಲೀಸರು, BNS ಆಕ್ಟ್ 281 IMV,184 ಸಕ್ಷನ್ ಅಡಿಯಲ್ಲಿ ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದು, ಯುವಕರ ಪತ್ತೆಗೆ ಕಾರ್ಯಚರಣೆ ನಡೆಸಿದ್ದಾರೆ. ಆದ್ರೆ, ಎಫ್​ಐಆರ್ ದಾಖಲಾಗುತ್ತಿದ್ದಂತೆಯೆ ಯುವಕರು ಫೋನ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದಾರೆ.

Published on: Apr 06, 2025 01:03 PM
Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More