BJP MLA in trouble: ಗಣಿಗಾರಿಕೆಗಾಗಿ ಅನುಮತಿ ಪಡೆಯದೆ ಸ್ಫೋಟಕಗಳನ್ನು ಬಳಸಿದ ಅರೋಪದಲ್ಲಿ ಶಾಸಕ ಮುನಿರತ್ನ ವಿರುದ್ಧ ಎಫ್ ಐಆರ್

Updated on: Jul 13, 2023 | 11:24 AM

ದೂರಿನ ಅನ್ವಯ ಚಿಕ್ಕಜಾಲ ಪೊಲೀಸರು ಶಾಸಕ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು: ಹಿಂದೊಮ್ಮೆ ಮುಖ್ಯಮಂತ್ರಿ ಸಿದ್ದರಾಮಯ್ಯರ ಆಪ್ತವಲಯದಲ್ಲಿ ಗರುತಿಸಿಕೊಂಡಿದ್ದ ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು (Munirathna Naidu) ಮತ್ತು ಇತರ ಮೂವರ ವಿರುದ್ದ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಒಂದು ಎಫ್ ಐಆರ್ (FIR) ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ಮುನಿರತ್ನ ಮತ್ತು ಅವರ ಸಂಗಡಿಗರು ಬೆಂಗಳೂರು ಉತ್ತರ (Bengaluru North ) ತಾಲ್ಲೂಕಿನ ಹುಣಸನಮಾರನಹಳ್ಳಿ ಬಳಿ ತಾವು ಖರೀದಿಸಿದ ಜಮೀನಿನಲ್ಲಿ ಗಣಿಗಾರಿಕೆ ನಡೆಸುತ್ತಿದ್ದು ಅನುಮತಿ ಪಡೆಯದೆ ಜಿಲೆಟಿನ್ ಅನ್ನು ಬಳಸಿ ಸ್ಫೋಟಗಳನ್ನು ನಡೆಸಿದ್ದಾರೆ. ಸ್ಥಳೀಯರು ಸ್ಪೋಟಕಗಳನ್ನು ಬಳಸಿದ್ದರ ವಿರುದ್ಧ ಪ್ರತಿಭಟನೆ ನಡೆಸಿದ ಬಳಿಕ ಯಲಹಂಕ ತಹಸೀಲ್ದಾರ್ ಅನಿಲ್ ಅರಳೋಕರ್ ಚಿಕ್ಕಜಾಲ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಚಿಕ್ಕಜಾಲ ಪೊಲೀಸರು ಶಾಸಕ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More