ಹಾಲು ಕೊಡುವ ಕಾಮಧೇನುವಿನ ಕೆಚ್ಚಲು ಕೊಯ್ದು ವಿಕೃತಿ, ಕೇಸ್ ಬುಕ್: ಸಿಎಂ ಹೇಳಿದ್ದೇನು?
ಛೇ.. ಇದೆಂಥಾ ವಿಕೃತಿ. ಅಸಲಿ ಅಥವಾ ಫೋಟೋಗಳನ್ನು ತೋರಿಸೋಕೆ ಆಗಲ್ಲ. ಯಾಕಂದ್ರೆ ಅಂತಹ ಕ್ರೂರ ದೃಶ್ಯ ನೋಡಿದ್ರೆ ಎಂತಹವರ ಕರುಳು ಚುರ್ ಅನ್ನುತ್ತೆ. ಬೆಂಗಳೂರಿನಲ್ಲಿ ಕಿಡಿಗೇಡಿಗಳು ಮೂಖ ಪ್ರಾಣಿಗಳ ಮೇಲೆ ಅಮಾನವೀಯ ಕೃತ್ಯ ಎಸಗಿದ್ದಾರೆ. ಹಾಲು ಕೊಡುವ ಕಾಮಧೇನುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆಯಲಾಗಿದೆ. ಈ ಬಗ್ಗೆ ಎಫ್ಐಆರ್ ದಾಖಲಾಗಿದೆ. ಇನ್ನು ಈ ಪ್ರಕರಣಕ್ಕೆ ಸಿಎಂ ಸಹ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು, (ಜನವರಿ 12): ಚಾಮರಾಜಪೇಟೆಯ ವಿನಾಯಕ ನಗರದ ಪೆನ್ಷನ್ ಮೊಲಾದಲ್ಲಿ ಹಾಲು ಕೊಡುವ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದಾರೆ. ನಿನ್ನೆ ಮಧ್ಯರಾತ್ರಿಯೇ ಕಿಡಿಗೇಡಿಗಳು ಹಸುವಿನ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ಇಂದು ನಸುಕಿನ ಜಾವ ಹಸುವಿನ ಮಾಲೀಕರಿಗೆ ಪಕ್ಕದ ಮನೆಯವರು ಮಾಹಿತಿ ನೀಡಿದ್ದಾರೆ. ನೀಚರ ಕೃತ್ಯಕ್ಕೆ ಮೂರು ಹಸುಗಳ ಮೂಕ ರೋಧನೆ ಮುಗಿಲು ಮುಟ್ಟಿದೆ. ಇನ್ನು ಈ ಸಂಬಂಧ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರನ್ನು ಕೂಡಲೇ ಪತ್ತೆ ಮಾಡಿ ಬಂಧಿಸಬೇಕೆಂದು ಪಟ್ಟು ಹಿಡಿದಿವೆ. ಇನ್ನು ಈ ಸಂಬಂಧ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಾಣಿ ಹಿಂಸಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಹಸುಗಳ ಕೆಚ್ಚಲು ಕೊಯ್ದದವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಇನ್ನು ಈ ಘಟನೆ ಸಂಬಂಧ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದು ದುಷ್ಕರ್ಮಿಗಳ ಕ್ರೌರ್ಯ. ಹಸುಗಳ ಕೆಚ್ಚಲು ಕೊಯ್ದಿದ್ದು ತಪ್ಪು, ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತೆ. ಯಾರು ಮಾಡಿದ್ದಾರೆಂದು ಗೊತ್ತಿಲ್ಲ, ಆರೋಪಿಗಳ ಪತ್ತೆ ಹಚ್ಚಲಾಗುತ್ತಿದೆ. ಕಮಿಷನರ್ ಗಮನಕ್ಕೆ ತಂದಿದ್ದೇನೆ, ಕಾನೂನು ಪ್ರಕಾರ ಶಿಕ್ಷೆಯಾಗುತ್ತೆ. ರಾಜಕೀಯಕ್ಕಾಗಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ಮಾಡಬಾರದು ಎಂದರು.
ಇದನ್ನೂ ಓದಿ: ಛೇ ಇದೆಂತಾ ವಿಕೃತಿ.. ಹಸುಗಳ ಕೆಚ್ಚಲು ಕೊಯ್ದ ದುರುಳರು, ಸ್ಥಳದಲ್ಲಿ ಬಿಗುವಿನ ವಾತಾವರಣ