ಹಾಲು ಕೊಡುವ ಕಾಮಧೇನುವಿನ ಕೆಚ್ಚಲು ಕೊಯ್ದು ವಿಕೃತಿ, ಕೇಸ್ ಬುಕ್: ಸಿಎಂ ಹೇಳಿದ್ದೇನು?

Updated on: Jan 12, 2025 | 4:50 PM

ಛೇ.. ಇದೆಂಥಾ ವಿಕೃತಿ. ಅಸಲಿ ಅಥವಾ ಫೋಟೋಗಳನ್ನು ತೋರಿಸೋಕೆ ಆಗಲ್ಲ. ಯಾಕಂದ್ರೆ ಅಂತಹ ಕ್ರೂರ ದೃಶ್ಯ ನೋಡಿದ್ರೆ ಎಂತಹವರ ಕರುಳು ಚುರ್ ಅನ್ನುತ್ತೆ. ಬೆಂಗಳೂರಿನಲ್ಲಿ ಕಿಡಿಗೇಡಿಗಳು ಮೂಖ ಪ್ರಾಣಿಗಳ ಮೇಲೆ ಅಮಾನವೀಯ ಕೃತ್ಯ ಎಸಗಿದ್ದಾರೆ. ಹಾಲು ಕೊಡುವ ಕಾಮಧೇನುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆಯಲಾಗಿದೆ. ಈ ಬಗ್ಗೆ ಎಫ್​ಐಆರ್ ದಾಖಲಾಗಿದೆ. ಇನ್ನು ಈ ಪ್ರಕರಣಕ್ಕೆ ಸಿಎಂ ಸಹ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಜನವರಿ 12): ಚಾಮರಾಜಪೇಟೆಯ ವಿನಾಯಕ ನಗರದ ಪೆನ್ಷನ್ ಮೊಲಾದಲ್ಲಿ ಹಾಲು ಕೊಡುವ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದಾರೆ. ನಿನ್ನೆ ಮಧ್ಯರಾತ್ರಿಯೇ ಕಿಡಿಗೇಡಿಗಳು ಹಸುವಿನ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ಇಂದು ನಸುಕಿನ ಜಾವ ಹಸುವಿನ ಮಾಲೀಕರಿಗೆ ಪಕ್ಕದ ಮನೆಯವರು ಮಾಹಿತಿ ನೀಡಿದ್ದಾರೆ. ನೀಚರ ಕೃತ್ಯಕ್ಕೆ ಮೂರು ಹಸುಗಳ ಮೂಕ ರೋಧನೆ ಮುಗಿಲು ಮುಟ್ಟಿದೆ. ಇನ್ನು ಈ ಸಂಬಂಧ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರನ್ನು ಕೂಡಲೇ ಪತ್ತೆ ಮಾಡಿ ಬಂಧಿಸಬೇಕೆಂದು ಪಟ್ಟು ಹಿಡಿದಿವೆ. ಇನ್ನು ಈ ಸಂಬಂಧ ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಾಣಿ ಹಿಂಸಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಹಸುಗಳ ಕೆಚ್ಚಲು ಕೊಯ್ದದವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಇನ್ನು ಈ ಘಟನೆ ಸಂಬಂಧ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದು ದುಷ್ಕರ್ಮಿಗಳ ಕ್ರೌರ್ಯ. ಹಸುಗಳ ಕೆಚ್ಚಲು ಕೊಯ್ದಿದ್ದು ತಪ್ಪು, ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತೆ. ಯಾರು ಮಾಡಿದ್ದಾರೆಂದು ಗೊತ್ತಿಲ್ಲ, ಆರೋಪಿಗಳ ಪತ್ತೆ ಹಚ್ಚಲಾಗುತ್ತಿದೆ. ಕಮಿಷನರ್ ಗಮನಕ್ಕೆ ತಂದಿದ್ದೇನೆ, ಕಾನೂನು ಪ್ರಕಾರ ಶಿಕ್ಷೆಯಾಗುತ್ತೆ. ರಾಜಕೀಯಕ್ಕಾಗಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ಮಾಡಬಾರದು ಎಂದರು.

ಇದನ್ನೂ ಓದಿ: ಛೇ ಇದೆಂತಾ ವಿಕೃತಿ.. ಹಸುಗಳ ಕೆಚ್ಚಲು ಕೊಯ್ದ ದುರುಳರು, ಸ್ಥಳದಲ್ಲಿ ಬಿಗುವಿನ ವಾತಾವರಣ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More