ಢಾಕಾದ ವಿಮಾನ ನಿಲ್ದಾಣದಲ್ಲಿ ಬೆಂಕಿ ಅವಘಡ; ಎಲ್ಲಾ ವಿಮಾನ ಕಾರ್ಯಾಚರಣೆ ಸ್ಥಗಿತ
ಬಾಂಗ್ಲಾದೇಶದ ಢಾಕಾದಲ್ಲಿರುವ ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಇಂದು (ಅಕ್ಟೋಬರ್ 18) ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸರಕು ಸಂಕೀರ್ಣದಿಂದ ದಟ್ಟವಾದ ಹೊಗೆ ಏರುತ್ತಿರುವುದನ್ನು ಗಮನಿಸಿದ ನಂತರ ಹಲವಾರು ಅಗ್ನಿಶಾಮಕ ತಂಡಗಳು ಸ್ಥಳಕ್ಕೆ ಧಾವಿಸಿದವು. ಬೆಂಕಿಯನ್ನು ನಂದಿಸಲು ಪ್ರಯತ್ನಗಳು ನಡೆಯುತ್ತಿವೆ.
ಢಾಕಾ, ಅಕ್ಟೋಬರ್ 18: ಬಾಂಗ್ಲಾದೇಶದ (Bangladesh) ಢಾಕಾದಲ್ಲಿರುವ ಹಜರತ್ ಶಹಜಲಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅಪಘಾತದ (Fire Accident) ಕಾರಣ ತಿಳಿದಿಲ್ಲ. ಇದುವರೆಗೂ ಯಾವುದೇ ಸಾವುನೋವುಗಳು ಅಥವಾ ಗಾಯಗಳಾಗಿವೆಯೇ ಎಂದು ಅಧಿಕಾರಿಗಳು ಇನ್ನೂ ಖಚಿತಪಡಿಸಿಲ್ಲ.
ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ದಟ್ಟವಾದ ಹೊಗೆ ಗಾಳಿಯಲ್ಲಿ ಆವರಿಸಿದ್ದರಿಂದ ಭೀತಿ ಹರಡಿತು. ಬೆಂಕಿಯನ್ನು ನಿಯಂತ್ರಿಸಲು ಕನಿಷ್ಠ 30 ಅಗ್ನಿಶಾಮಕ ವಾಹನಗಳು ಆಗಮಿಸಿದವು. ಆದರೂ ಬೆಂಕಿ ಆರಿಸಲು ಬಹಳ ಸಮಯ ಬೇಕಾಯಿತು. ಈ ಘಟನೆಯಿಂದಾಗಿ ವಿಮಾನ ನಿಲ್ದಾಣದಿಂದ ವಿಮಾನ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ