Loading video

ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ; ಗ್ರಾಮಗಳ ಸ್ಥಳಾಂತರ

|

Updated on: Mar 18, 2025 | 7:12 PM

ಜಾರ್ಖಂಡ್​ ರಾಜ್ಯದ ದಿಯೋಘರ್‌ನಲ್ಲಿರುವ ಜಸಿದಿಹ್‌ನಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸ್ಥಾವರದಲ್ಲಿ ಸೋಮವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಸ್ಥಾವರ ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಲು ಶ್ರಮಿಸುತ್ತಿರುವುದರಿಂದ ಅಧಿಕಾರಿಗಳು ಹತ್ತಿರದ ಹಳ್ಳಿಗಳಲ್ಲಿ ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಬೆಂಕಿಯ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಅಗ್ನಿಶಾಮಕ ದಳ ಮತ್ತು ತುರ್ತು ಪ್ರತಿಕ್ರಿಯೆ ತಂಡಗಳು ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿವೆ.

ರಾಂಚಿ, (ಮಾರ್ಚ್ 18): ಜಾರ್ಖಂಡ್ ರಾಜ್ಯದ ದಿಯೋಘರ್‌ನಲ್ಲಿರುವ ಜಸಿದಿಹ್‌ನಲ್ಲಿರುವ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಜ್ವಾಲೆಗಳು ವೇಗವಾಗಿ ಹರಡುತ್ತಿವೆ. ದಟ್ಟವಾದ ಹೊಗೆ ಮತ್ತು ಬೆಂಕಿಯ ಜ್ವಾಲೆಗಳು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೀತಿ ಮೂಡಿಸಿತು. ಬೆಂಕಿ ದುರಂತದ ಹಿನ್ನೆಲೆಯಲ್ಲಿ ಸಮೀಪದ ಗ್ರಾಮಗಳನ್ನು ಸ್ಥಳಾಂತರಿಸಲಾಗುತ್ತಿದೆ. ನಿವಾಸಿಗಳ ಸುರಕ್ಷತೆಗಾಗಿ ಪೊಲೀಸರು ಜಿಲ್ಲಾಡಳಿತವು ಹತ್ತಿರದ ಹಳ್ಳಿಗಳನ್ನು ಸ್ಥಳಾಂತರಿಸಲು ಪ್ರಾರಂಭಿಸಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸ್ಥಾವರದ ಸುತ್ತಲಿನ ಸಂಪೂರ್ಣ ಪ್ರದೇಶವನ್ನು ಸುತ್ತುವರೆದಿದೆ. ಈ ಸ್ಥಾವರಕ್ಕೆ ಸಮೀಪದಲ್ಲಿರುವ ಹಳ್ಳಿಗಳಿಂದ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಪ್ರಯತ್ನಗಳು ಮುಂದುವರೆದಿವೆ. ಬೆಂಕಿಯ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಅಗ್ನಿಶಾಮಕ ದಳ ಮತ್ತು ತುರ್ತು ಪ್ರತಿಕ್ರಿಯೆ ತಂಡಗಳು ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 18, 2025 07:11 PM