ಬೆಳ್ಳಂಬೆಳಗ್ಗೆ ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಸುಟ್ಟುಭಸ್ಮವಾದ ಬಸ್​, 10ಕ್ಕೂ ಹೆಚ್ಚು ಬೈಕ್​ಗಳು

Edited By:

Updated on: Apr 02, 2025 | 8:34 AM

ಚಿಂತಾಮಣಿಯಲ್ಲಿ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಸುಟ್ಟುಹೋಗಿದೆ. ಡಿಕ್ಕಿಯ ರಭಸಕ್ಕೆ ಪಕ್ಕದಲ್ಲಿದ್ದ ಹತ್ತುಕ್ಕೂ ಹೆಚ್ಚು ಬೈಕ್‌ಗಳು ಸಹ ಬೆಂಕಿಗಾಹುತಿಯಾಗಿವೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಪರಾರಿಯಾಗಿದ್ದಾನೆ. ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿದ್ದಾರೆ. ಚಿಂತಾಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಚಿಕ್ಕಬಳ್ಳಾಪುರ, ಏಪ್ರಿಲ್​ 02: ವಿದ್ಯುತ್ ಕಂಬ, ಕಾಪೌಂಡ್​ಗೆ ಖಾಸಗಿ ಬಸ್ (Private Bus) ಡಿಕ್ಕಿ ಹೊಡೆದ ಪರಿಣಾಮ ಬೆಂಕಿ (fire) ಹೊತ್ತಿಕೊಂಡು ಬಸ್ ಸುಟ್ಟುಭಸ್ಮವಾಗಿರುವಂತಹ ಘಟನೆ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ. ಬಸ್​ಗೆ ಬೆಂಕಿ ತಗುಲಿ ಪಕ್ಕದಲ್ಲಿದ್ದ 10ಕ್ಕೂ ಹೆಚ್ಚು ಹಳೇ ಬೈಕ್​ಗಳೂ ಸುಟ್ಟುಭಸ್ಮವಾಗಿವೆ. ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಬೈಕ್​ಗಳನ್ನು ಜಪ್ತಿ ಮಾಡಿದ್ದರು. ಇನ್ನು ಬೆಂಕಿ ಹೊತ್ತಿಕೊಂಡ ಜಾಗದ ಬಳಿಯೇ ಪೆಟ್ರೋಲ್ ಬಂಕ್ ಕೂಡ ಇದೆ. ಸ್ಥಳೀಯರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿಗಳಿಂದ ಬೆಂಕಿ ನಂದಿಸಲಾಗಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.