ದೆಹಲಿಯ ರೆಸ್ಟೋರೆಂಟ್‌ನಲ್ಲಿ ಬೆಂಕಿ; ಜೀವ ಉಳಿಸಿಕೊಳ್ಳಲು ಮೇಲಿಂದ ಜಿಗಿದ ಜನರು
ದೆಹಲಿಯ ರಜೌರಿ ಗಾರ್ಡನ್ನಲ್ಲಿ ಹೊತ್ತಿಕೊಂಡ ಬೆಂಕಿ ಜಂಗಲ್ ಜಾಂಬೋರಿ ರೆಸ್ಟೋರೆಂಟ್‌ನ ಛಾವಣಿಯಿಂದ ಎಲ್ಲೆಡೆ ಹರಡಿದೆ. ಇದರಿಂದ ಭಯಭೀತರಾದ ಜನರು ಟೆರೇಸ್ನಿಂದ ಮತ್ತೊಂದು ಟೆರೇಸಿಗೆ ಜಿಗಿದಿದ್ದಾರೆ. ಈ ಭಯಾನಕ ವಿಡಿಯೋ ವೈರಲ್ ಆಗಿದೆ.
ನವದೆಹಲಿ: ದೆಹಲಿಯ ರಜೌರಿ ಗಾರ್ಡನ್ ಮೆಟ್ರೋ ನಿಲ್ದಾಣದ ಬಳಿ ಕಟ್ಟಡದ ಮೊದಲ ಮಹಡಿಯಲ್ಲಿರುವ ರೆಸ್ಟೋರೆಂಟ್‌ನಲ್ಲಿ ಇಂದು ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯ ಸಾಮಾಜಿಕ ಮಾಧ್ಯಮದ ದೃಶ್ಯಗಳು ವೈರಲ್ ಆಗಿವೆ. ಜಂಗಲ್ ಜಾಂಬೋರಿ ರೆಸ್ಟೋರೆಂಟ್‌ನ ಮೇಲ್ಛಾವಣಿಯಲ್ಲಿ ಬೆಂಕಿ ಕೆನ್ನಾಲಿಗೆ ಚಾಚುತ್ತಿತ್ತು. ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದರು. ಆದರೆ, ಇದಕ್ಕೂ ಮೊದಲು ಪ್ರಾಣ ಉಳಿಸಿಕೊಳ್ಳುವ ಸಲುವಾಗಿ ಹಲವರು ಮೇಲಿಂದ ಪಕ್ಕದ ಟೆರೇಸಿಗೆ ಜಿಗಿದಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂಬುದು ಇನ್ನೂ ತಿಳಿದು ಬಂದಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ