ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್ನಲ್ಲಿ ಅಗ್ನಿ ಅವಘಡ
ವಿಕ್ಟೋರಿಯಾ ಆಸ್ಪತ್ರೆಯ ವಾರ್ಡೊಂದರಲ್ಲಿ ಮಂಗಳವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್, ಸಾವು-ನೋವು ಸಂಭವಿಸಿಲ್ಲ. ಬೆಂಕಿ ಹೊತ್ತಿಕೊಂಡಿದ್ದು ಗಮನಕ್ಕೆ ಬಂದ ಕೂಡಲೇ ಆ ವಾರ್ಡ್ನಲ್ಲಿದ್ದ ರೋಗಿಗಳನ್ನು ಮತ್ತೊಂದು ವಾರ್ಡ್ಗೆ ಸ್ಥಳಾಂತರಿಸಲಾಯಿತು. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಸಂಭಾವ್ಯ ಅನಾಹುತ ತಪ್ಪಿಸಿದ್ದಾರೆ.
ಬೆಂಗಳೂರು, ಜುಲೈ 1: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್ನಲ್ಲಿ ಮಂಗಳವಾರ ನಸುಕಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ವಿಚ್ ಬೋರ್ಡ್ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಐಸಿಯುನಲ್ಲಿದ್ದ 5 ಮಂದಿ ರೋಗಿಗಳು ಸೇರಿ ಒಟ್ಟು 26 ರೋಗಿಗಳು ಸುರಕ್ಷಿತರಾಗಿದ್ದಾರೆ. ಬೆಂಕಿ ಕಾಣಿಸಿಕೊಂಡ ತಕ್ಷಣ ರೋಗಿಗಳನ್ನು ಬೇರೆ ವಾರ್ಡ್ಗೆ ಸ್ಥಳಾಂತರ ಮಾಡಲಾಗಿದೆ. ಬರ್ನಿಂಗ್ ವಾರ್ಡ್ನಲ್ಲಿದ್ದ ಎಲ್ಲಾ ರೋಗಿಗಳನ್ನು ಹೆಚ್ ಬ್ಲಾಕ್ಗೆ ಸ್ಥಳಾಂತರ ಮಾಡಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
Latest Videos
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
