ರಾಜಾಜಿನಗರ ಮೆಟ್ರೋ ನಿಲ್ದಾಣ ಬಳಿ ಅಗ್ನಿ ಅವಘಡ; ಸುಟ್ಟು ಕರಕಲಾದ 4 ಬೈಕ್​ಗಳು

Edited By:

Updated on: Jan 16, 2024 | 7:50 AM

ಇಂದು ಬೆಳಗಿನ ಜಾವ ರಾಜಾಜಿನಗರ ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ಬೈಕ್​ಗಳಿಗೆ ಏಕಾಏಕಿ ಬೆಂಕಿ ತಗುಲಿದೆ. ಈ ಪರಿಣಾಮ ಬೈಕ್​ಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ‌ ನಂದಿಸಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

ಬೆಂಗಳೂರು, ಜ.16:  ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ನಿಲ್ದಾಣ (Bengaluru Metro) ಬಳಿ ಅಗ್ನಿ ಅವಘಡ ಸಂಭವಿಸಿದೆ (Fire Accident). ರಾಜಾಜಿನಗರ ಮೆಟ್ರೋ ನಿಲ್ದಾಣ (Rajajinagar Metro Station) ಬಳಿ ನಿಂತಿದ್ದ 4 ಬೈಕ್​ಗಳಿಗೆ ಬೆಂಕಿ ತಗುಲಿದ್ದು ಬೈಕ್​ಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ‌ ನಂದಿಸಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇಂದು ಬೆಳಗಿನ ಜಾವ ರಾಜಾಜಿನಗರ ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ಬೈಕ್​ಗಳಿಗೆ ಏಕಾಏಕಿ ಬೆಂಕಿ ತಗುಲಿದೆ. ಈ ಪರಿಣಾಮ ಬೈಕ್​ಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದ್ವಿಚಕ್ರ ವಾಹನಗಳು ಸುಟ್ಟು ಹೋದ ಕಾರಣ ಸವಾರರು ಕಂಗಾಲಾಗಿದ್ದಾರೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published on: Jan 16, 2024 07:47 AM
Follow Us
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More