ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ
ಬೆಂಗಳೂರಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿರುವ ಏರಿಯಾನ್ ಟೆಕ್ನಾಲಜಿ ಕಂಪನಿಯಲ್ಲಿ ಶಾರ್ಟ್ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಎಲೆಕ್ಟ್ರಾನಿಕ್ ಸಿಟಿ ಮೂರು ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಬೆಂಗಳೂರು, ಸೆ.26: ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿರುವ ಏರಿಯಾನ್ ಟೆಕ್ನಾಲಜಿ ಕಂಪನಿಯಲ್ಲಿ ಶಾರ್ಟ್ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಎಲೆಕ್ಟ್ರಾನಿಕ್ ಸಿಟಿ ಮೂರು ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಘಟನೆಯಲ್ಲಿ ಬೆಲೆಬಾಳುವ ವಸ್ತುಗಳು ಬೆಂಕಿಗಾಹುತಿಯಾಗಿದೆ. ಇನ್ನು ಈ ಕಂಪನಿಯಲ್ಲಿ ಟಯೋಟಾ ಸೇರಿದಂತೆ ವಿವಿಧ ಕಂಪನಿಗಳ ಬಿಡಿ ಭಾಗಗಳ ತಯಾರಿಕೆ ಜೊತೆಗೆ 3D ಡೆಕೊರೇಷನ್ ಹಾಗೂ ಹೈಡ್ರೋಗ್ರಾಫಿಕ್ ಪೇಂಟಿಂಗ್ ಕೂಡ ಮಾಡಲಾಗುತ್ತಿತ್ತು. ಇಂದು ಸಂಜೆಯ ವೇಳೆ ಏಕಾಎಕಿ ಅವಘಡ ಸಂಭವಿಸಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos