Loading video

ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ

|

Updated on: Mar 22, 2025 | 8:14 PM

ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿಗಳ ಶೋ ರೂಂನಲ್ಲಿ ಇಂದು (ಮಾರ್ಚ್ 22) ಭಾರಿ ಬೆಂಕಿ ಅವಘಡ ಸಂಭವಿಸಿದೆ. ಕನಿಷ್ಠ 11 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಇಲ್ಲಿಯವರೆಗೆ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ನಡೆಯುತ್ತಿರುವ ಅಗ್ನಿಶಾಮಕ ಕಾರ್ಯಾಚರಣೆಯಿಂದಾಗಿ ಪ್ರಯಾಣಿಕರು ಈ ಪ್ರದೇಶದಲ್ಲಿ ಸಂಚಾರ ದಟ್ಟಣೆಯನ್ನು ಅನುಭವಿಸಿದ್ದಾರೆ.

ನವದೆಹಲಿ, ಮಾರ್ಚ್ 22: ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆ ಪ್ರದೇಶದ ಚಪ್ಪಲಿಗಳ ಶೋ ರೂಂನಲ್ಲಿ ಇಂದು (ಮಾರ್ಚ್ 22) ಭಾರಿ ಬೆಂಕಿ ಅವಘಡ ಸಂಭವಿಸಿದೆ. ಇಂದು ಬೆಳಿಗ್ಗೆ ಕನಿಷ್ಠ 11 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿಯ ಬಗ್ಗೆ ಬೆಳಿಗ್ಗೆ 11.17 ರ ಸುಮಾರಿಗೆ ಕರೆ ಬಂದಿದೆ ಎಂದು ಅಗ್ನಿಶಾಮಜ ದಳದ ಅಧಿಕಾರಿ ತಿಳಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ