ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ

Updated on: Apr 14, 2025 | 8:14 PM

"ಇದು ಸಣ್ಣ ಬೆಂಕಿಯಾಗಿದ್ದು, ಅಗ್ನಿಶಾಮಕ ವಾಹನವನ್ನು ಸ್ಥಳಕ್ಕೆ ರವಾನಿಸಲಾಯಿತು ಮತ್ತು ಬೆಂಕಿಯನ್ನು ತ್ವರಿತವಾಗಿ ನಿಯಂತ್ರಣಕ್ಕೆ ತರಲಾಯಿತು" ಎಂದು ಬಂಜಾರ ಹಿಲ್ಸ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿ ಅವಘಡ ಸಂಭವಿಸಿದಾಗ ಹೋಟೆಲ್‌ನ ಮತ್ತೊಂದು ಟವರ್‌ನಲ್ಲಿ ತಂಗಿದ್ದ SRH ತಂಡದ ಕೆಲವು ಆಟಗಾರರು ಹೋಟೆಲ್‌ನಲ್ಲಿ ಇರಲಿಲ್ಲ ಎನ್ನಲಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ತಕ್ಷಣ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು.

ಹೈದರಾಬಾದ್, ಏಪ್ರಿಲ್ 14: ಐಪಿಎಲ್ ಪಂದ್ಯಾವಳಿ ನಡೆಯುತ್ತಿದೆ. ಸನ್‌ರೈಸರ್ಸ್ ಹೈದರಾಬಾದ್ (SRH) ಕ್ರಿಕೆಟ್ ತಂಡ ತಂಗಿರುವ ಸ್ಟಾರ್ ಹೋಟೆಲ್‌ನಲ್ಲಿ ಇಂದು ಸಣ್ಣ ಬೆಂಕಿ ಅವಘಡ ಸಂಭವಿಸಿದೆ. ಈ ಹೋಟೆಲ್ ಹೈದರಾಬಾದ್‌ನ ಐಷಾರಾಮಿ ಬಂಜಾರ ಹಿಲ್ಸ್ ಪ್ರದೇಶದಲ್ಲಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ತಕ್ಷಣ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಅಗ್ನಿಶಾಮಕ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್​ನ ಸ್ಟಾರ್ ಹೋಟೆಲ್‌ನ ಮೊದಲ ಮಹಡಿಯಲ್ಲಿರುವ ಸ್ಪಾದ ಸ್ಟೀಮ್ ರೂಮ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಆ ಪ್ರದೇಶದಿಂದ ಹೊಗೆ ಹೊರಹೊಮ್ಮಿದೆ. ಆ ಸಮಯದಲ್ಲಿ ಸ್ಪಾದಲ್ಲಿ ಯಾರೂ ಇರಲಿಲ್ಲ. ಬೆಂಕಿ ಅವಘಡ ಸಂಭವಿಸಿದಾಗ ಹೋಟೆಲ್‌ನ ಮತ್ತೊಂದು ಟವರ್‌ನಲ್ಲಿ ತಂಗಿದ್ದ SRH ತಂಡದ ಕೆಲವು ಆಟಗಾರರು ಹೋಟೆಲ್‌ನಲ್ಲಿ ಇರಲಿಲ್ಲ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ