Video: ಉತ್ತರಾಖಂಡದ ಆರ್ಮಿ ಕ್ಯಾಂಪ್ ಒಳಗೆ ಭಾರಿ ಅಗ್ನಿ ಅವಘಡ

Updated on: Jan 04, 2026 | 9:30 AM

ಉತ್ತರಾಖಂಡದ ಜೋಶಿಮಠದ ಔಲಿ ರಸ್ತೆಯಲ್ಲಿರುವ ಸೇನಾ ಶಿಬಿರದ ಒಳಗಿನ ಅಂಗಡಿಯೊಂದರಲ್ಲಿ ಶುಕ್ರವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ವಿಡಿಯೋದಲ್ಲಿ ದಟ್ಟವಾದ ಹೊಗೆಯನ್ನು ಕಾಣಬಹುದು. ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸುವ ಪ್ರಯತ್ನಗಳನ್ನು ಪ್ರಾರಂಭಿಸಿದ್ದಾರೆ.ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸೇನಾ ನೆಲೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವುದು ಇದೇ ಮೊದಲಲ್ಲ.

ಜೋಶಿಮಠ, ಜನವರಿ 04: ಉತ್ತರಾಖಂಡದ ಜೋಶಿಮಠದ ಔಲಿ ರಸ್ತೆಯಲ್ಲಿರುವ ಸೇನಾ ಶಿಬಿರದ ಒಳಗಿನ ಅಂಗಡಿಯೊಂದರಲ್ಲಿ ಶುಕ್ರವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ವಿಡಿಯೋದಲ್ಲಿ ದಟ್ಟವಾದ ಹೊಗೆಯನ್ನು ಕಾಣಬಹುದು. ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸುವ ಪ್ರಯತ್ನಗಳನ್ನು ಪ್ರಾರಂಭಿಸಿದ್ದಾರೆ.ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸೇನಾ ನೆಲೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವುದು ಇದೇ ಮೊದಲಲ್ಲ.

ಕಳೆದ ವರ್ಷ ಮೇ ತಿಂಗಳಲ್ಲಿ, ಲೇಹ್‌ನ ಡಿಗ್ರಿ ಕಾಲೇಜು ಬಳಿಯ ಸೇನಾ ಶಿಬಿರದಲ್ಲಿ ದೊಡ್ಡ ಬೆಂಕಿ ಕಾಣಿಸಿಕೊಂಡಿತ್ತು. ಬೆಳಗಿನ ಜಾವದಲ್ಲಿ ಬೆಂಕಿ ಕಟ್ಟಡದಾದ್ಯಂತ ಬೇಗನೆ ಹರಡಿತ್ತು, ಇದರಿಂದಾಗಿ ಸ್ಥಳೀಯ ಪೊಲೀಸರು, ಸೇನಾ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದ ತಂಡಗಳು ತ್ವರಿತ ಪ್ರತಿಕ್ರಿಯೆ ನೀಡಿದ್ದವು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More