ದೆಹಲಿಯ ಸಂಸತ್ ಭವನದ ನಾರ್ತ್ ಬ್ಲಾಕ್‌ನಲ್ಲಿ ಭಾರಿ ಅಗ್ನಿ ಅವಘಡ: ದಟ್ಟವಾಗಿ ಆವರಿಸಿದ ಹೊಗೆ

Updated on: Oct 26, 2026 | 1:09 PM

ಸಂಸತ್‌ನ ನಾರ್ತ್ ಬ್ಲಾಕ್‌ನಲ್ಲಿ ನವೀಕರಣ ಕಾಮಗಾರಿ ನಡೆಯುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ. ವೆಲ್ಡಿಂಗ್ ಕಿಡಿಯಿಂದ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಆವರಿಸಿದ್ದರಿಂದ ಅಲ್ಲಿದ್ದ ಜನರಲ್ಲಿ ಆತಂಕ ಮನೆ ಮಾಡಿತ್ತು. ಘಟನಾ ಸ್ಥಳಕ್ಕೆ ಆರು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ.

ದೆಹಲಿ, ಅ.26: ಸಂಸತ್ ಭವನದ ನಾರ್ತ್ ಬ್ಲಾಕ್‌ನಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡದಲ್ಲಿ ನವೀಕರಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ವೆಲ್ಡಿಂಗ್ ಕಾರ್ಯದ ವೇಳೆ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದ ಕಿಡಿ ಹಾರಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ದಟ್ಟವಾದ ಹೊಗೆ ಆವರಿಸಿಕೊಂಡಿದ್ದು, ಇದು ಕೆಲಕಾಲ ಅಲ್ಲಿದ್ದವರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಆಕಾಶದಲ್ಲಿ ಕಾಣಿಸಿಕೊಂಡ ದಟ್ಟ ಹೊಗೆಯಿಂದಾಗಿ ಪರಿಸ್ಥಿತಿ ಗಂಭೀರವಾಗಿತ್ತು. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಘಟನಾ ಸ್ಥಳಕ್ಕೆ ಆರು ಅಗ್ನಿಶಾಮಕ ವಾಹನಗಳು ಧಾವಿಸಿವೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಕೂಡಲೇ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಶ್ರಮಿಸುತ್ತಿದ್ದಾರೆ. ನವೀಕರಣ ಕಾರ್ಯದ ವೇಳೆ ಉಂಟಾದ ಈ ಅಗ್ನಿ ಅವಘಡದಿಂದ ಯಾವುದೇ ದೊಡ್ಡ ಪ್ರಮಾಣದ ಹಾನಿ ಅಥವಾ ಪ್ರಾಣಾಪಾಯ ಸಂಭವಿಸಿದ ಬಗ್ಗೆ ಇದುವರೆಗೆ ವರದಿಯಾಗಿಲ್ಲ. ಸುರಕ್ಷತಾ ಕ್ರಮಗಳನ್ನು ಪಾಲಿಸುವ ಅಗತ್ಯವನ್ನು ಈ ಘಟನೆ ಮತ್ತೊಮ್ಮೆ ಎತ್ತಿ ತೋರಿಸಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More