ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ

Edited By:

Updated on: Jan 15, 2026 | 6:57 AM

ಬೆಂಗಳೂರಿನ ಅಕ್ಷಯನಗರದಲ್ಲಿರುವ ಗುಜರಿ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ನಾಲ್ಕು ವಾಹನಗಳು ಹಾಗೂ 20ಕ್ಕೂ ಹೆಚ್ಚು ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅದೃಷ್ಟವಶಾತ್, ಸಾವು-ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಸದ್ಯ ಬೇಗೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು, ಜನವರಿ 15: ನಗರದ ಬೇಗೂರು ಪ್ರದೇಶದ ಅಕ್ಷಯನಗರದಲ್ಲಿರುವ ಸ್ಕ್ರಾಪ್ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಗೋದಾಮಿನಲ್ಲಿ ಸಂಗ್ರಹಿಸಿದ್ದ ಹಳೆಯ ಪ್ಲಾಸ್ಟಿಕ್ ವಸ್ತುಗಳು ಧಗಧಗನೆ ಹೊತ್ತಿ ಉರಿದಿದ್ದು, ಇಡೀ ಪ್ರದೇಶದಲ್ಲಿ ಆತಂಕ ಉಂಟಾಯಿತು. ಬೆಂಕಿಯ ಮಾಹಿತಿ ದೊರಕುತ್ತಿದ್ದಂತೆಯೇ ಅಗ್ನಿಶಾಮಕ ದಳದ ನಾಲ್ಕು ವಾಹನಗಳು ಹಾಗೂ 20ಕ್ಕೂ ಹೆಚ್ಚು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಸದ್ಯ ಬೆಂಕಿಯನ್ನು ಬಹುತೇಕ ನಿಯಂತ್ರಣಕ್ಕೆ ತರಲಾಗಿದೆ. ಘಟನೆ ಕುರಿತು ಬೇಗೂರು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.