ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ: ಕೂಡಲೇ ಸಚಿವರನ್ನ ಕರೆದೊಯ್ದ ಸಿಬ್ಬಂದಿ
ರಾಯಚೂರಿನ ಸಿಂಧನೂರಿನಲ್ಲಿ ನಡೆದ 151 ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆಯಿತು. ಡಿಸಿಎಂ ಡಿಕೆ ಶಿವಕುಮಾರ್ ನಿರ್ಗಮನದ ಬೆನ್ನಲ್ಲೇ ವೇದಿಕೆ ಮೆಟ್ಟಿಲುಗಳ ಬಳಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿತು. ಸಚಿವ ಈಶ್ವರ ಖಂಡ್ರೆ ಪಕ್ಕದಲ್ಲೇ ನಡೆದ ಈ ಘಟನೆಯಿಂದ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.
ರಾಯಚೂರು, ಮೇ 03: ಜಿಲ್ಲೆಯ ಸಿಂಧನೂರಿನಲ್ಲಿ 151 ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವಘಡವೊಂದು ಸಂಭವಿಸಿದೆ. ವೇದಿಕೆ ಮೇಲಿಂದ ಡಿಸಿಎಂ ಡಿಕೆ ಶಿವಕುಮಾರ್ ತೆರಳಿದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಇದೇ ವೇಳೆ ಸಚಿವ ಈಶ್ವರ ಖಂಡ್ರೆ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಸಿಬ್ಬಂದಿ ಕೂಡಲೇ ಅವರನ್ನು ಪಕ್ಕಕ್ಕೆ ಕರೆದುಕೊಂಡ ಹೋದರು. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸುತ್ತಿದ್ದಂತೆ ಕೆಲಕಾಲ ಆತಂಕ ಉಂಟಾಗಿತ್ತು. ಹೊಗೆ ಹೆಚ್ಚಾದ ಹಿನ್ನೆಲೆ ಸ್ಥಳೀಯರು ಕೂಡ ಗಾಬರಿಗೊಂಡಿದ್ದರು. ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಸಿ ಫೈರ್ ಉಪಕರಣದಿಂದ ಬೆಂಕಿ ನಂದಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

