AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್ ಸಿಲಿಂಡರ್ ಸ್ಫೋಟ: ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ

ಆಕ್ಸಿಜನ್ ಸಿಲಿಂಡರ್ ಸ್ಫೋಟ: ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Jun 30, 2026 | 12:25 PM

Share

ಮುಖ್ಯಾಂಶಗಳು

  • ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
  • ಆಕ್ಸಿಜನ್​​ ಸಿಲಿಂಡರ್​​ ಸ್ಫೋಟದಿಂದ ಹೊತ್ತಿಕೊಂಡ ಬೆಂಕಿ
  • ಲಕ್ಷಾಂತರ ರೂ. ಮೌಲ್ಯದ ಯಂತ್ರೋಪಕರಣಗಳಿಗೆ ಹಾನಿ

Davanagere News: ದಾವಣಗೆರೆ ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದೆ. ಘಟನೆಯಿಂದ ದಟ್ಟ ಹೊಗೆ ಆವರಿಸಿ ರೋಗಿಗಳಲ್ಲಿ ಆತಂಕ ಮೂಡಿಸಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲವಾದರೂ, ಆಪರೇಷನ್ ಥಿಯೇಟರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ದಾವಣಗೆರೆ, ಜೂನ್​​ 30: ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಆಪರೇಷನ್ ಥಿಯೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ದಾವಣಗೆರೆಯ ಚಿಗಟೇರಿಯಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ಸಕಾಲಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದಿದ್ದರಿಂದ ಸಂಭವನೀಯ ದೊಡ್ಡ ದುರಂತವೊಂದು ತಪ್ಪಿದೆ. ಆಸ್ಪತ್ರೆಯ ಗಾಜು ಒಡೆದು ಒಳ ಪ್ರವೇಶಿಸಿದ್ದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಆಪರೇಷನ್ ಥಿಯೇಟರ್‌ನಲ್ಲಿ ಇನ್ನಷ್ಟು ಆಕ್ಸಿಜನ್ ಸಿಲಿಂಡರ್‌ಗಳಿದ್ದವು. ಅವು ಕೂಡ ಸ್ಫೋಟಗೊಂಡಿದ್ದರೆ ಭಾರಿ ಅನಾಹುತ ಸಂಭವಿಸುತ್ತಿತ್ತು. ಆದರೆ ಸಕಾಲದಲ್ಲಿ ಸಿಬ್ಬಂದಿ ಬೆಂಕಿ ನಂದಿಸಿದ್ದರಿಂದ ತಪ್ಪಿರುವ ಭಾರಿ ಅವಘಡ ತಪ್ಪಿದೆ. ಇನ್ನು ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಯಂತ್ರೋಪಕರಣಗಳು ಬೆಂಕಿಗಾಹುತಿಯಾಗಿವೆ. ಸಿಲಿಂಡರ್ ಸ್ಫೋಟಗೊಂಡಾಗ ಯಾವುದೇ ರೋಗಿಗಳು ಇರಲಿಲ್ಲ. ಇಂದು ಒಂಬತ್ತು ರೋಗಿಗಳಿಗೆ ಆಪರೇಷನ್‌ ನಡೆಸಬೇಕಿತ್ತು. ಇದಕ್ಕಾಗಿ ಅರವಳಿಕೆ ತಜ್ಞರು ಸಿದ್ಧತೆ ಮಾಡಿಕೊಂಡಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ 22 ವೈದ್ಯ ಸಿಬ್ಬಂದಿ, ರೋಗಿಗಳು, ಸಂಬಂಧಿಕರು ಸಹ ಆಸ್ಪತ್ರೆಯಿಂದ ಹೊರಬಂದಿದ್ದರು ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 30, 2026 11:25 AM

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More