ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಬಳ್ಳಾರಿ ಬಳಿಯ ಹಗರಿ ಗ್ರಾಮದಲ್ಲಿ ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬುಧವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರು ಆತಂಕಕ್ಕೊಳಗಾಗಿದ್ದರು. ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಈ ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ನಂದಿಸಿದ ನಂತರ ರೈಲು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದೆ. ಘಟನೆಯ ವಿಡಿಯೋ ಇಲ್ಲಿದೆ.
ಬಳ್ಳಾರಿ, ಏಪ್ರಿಲ್ 9: ಬಳ್ಳಾರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬುಧವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಹಗರಿ ಗ್ರಾಮದ ಬಳಿ ರೈಲು ಚಲಿಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ತಕ್ಷಣ ರೈಲು ನಿಲ್ಲಿಸಿ ಬೆಂಕಿ ನಂದಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ನಂದಿಸಿದ ಬಳಿಕ ರೈಲು ಪ್ರಯಾಣ ಮುಂದುವರಿಸಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us