AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ: ಸಿನಿಮಾ ಸ್ಟೈಲ್​​ನಲ್ಲಿ ಪ್ರಯಾಣಿಕರ ರಕ್ಷಣೆ

ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ: ಸಿನಿಮಾ ಸ್ಟೈಲ್​​ನಲ್ಲಿ ಪ್ರಯಾಣಿಕರ ರಕ್ಷಣೆ

ಪ್ರಸನ್ನ ಹೆಗಡೆ
|

Updated on: May 17, 2026 | 10:00 AM

Share

ತಿರುವನಂತಪುರಂ-ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಬಿ-1 ಕೋಚ್‌ನಲ್ಲಿ ಲೂನಿ ರಿಚ್ಛಾ-ವಿಕ್ರಮ್‌ಗಢ್ ಅಲೋಟ್ ನಡುವೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬೆಂಕಿಯ ತೀವ್ರತೆಗೆ ಬೋಗಿ ಹೊತ್ತಿ ಉರಿದಿದ್ದು, ಕೂಡಲೇ ಎಚ್ಚೆತ್ತ ಸಿಬ್ಬಂದಿ ತಕ್ಷಣ ಪ್ರಯಾಣಿಕರನ್ನು ರಕ್ಷಿಸಿ ಕೋಚ್ ಬೇರ್ಪಡಿಸಿದ ಪರಿಣಾಮ ಸಂಭವನೀಯ ಹೆಚ್ಚಿನ ಅನಾಹುತ ತಪ್ಪಿದೆ.

ಭೋಪಾಲ್, ಮೇ 17:ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಬಿ-1 ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಲೂನಿ ರಿಚ್ಛಾ (LNR) ಮತ್ತು ವಿಕ್ರಮ್‌ಗಢ್ ಅಲೋಟ್ (VMA) ನಿಲ್ದಾಣಗಳ ಮಧ್ಯೆ ಈ ಅವಘಡ ಸಂಭವಿಸಿದೆ. ಕೋಚ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಯಾವುದೇ ಪ್ರಯಾಣಿಕರು ಅಥವಾ ರೈಲ್ವೆ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಿಗ್ಗೆ 5.15ಕ್ಕೆ ತಿರುವನಂತಪುರಂನಿಂದ ನಿಜಾಮುದ್ದೀನ್‌ಗೆ ತೆರಳುತ್ತಿದ್ದ 12431 ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಹಿಂಭಾಗದ SLR ಹಾಗೂ B1 ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಗಮನಕ್ಕೆ ಬರುತ್ತಿದ್ದಂತೆ ರೈಲ್ವೆ ಸಿಬ್ಬಂದಿ ತಕ್ಷಣ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಬೆಂಕಿ ತಗುಲಿದ ಕೋಚ್ ಅನ್ನು ರೈಲಿನಿಂದ ಬೇರ್ಪಡಿಸಿದ ಪರಿಣಾಮ ಹೆಚ್ಚಿನ ಅನಾಹುತ ತಪ್ಪಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More