ಬೆಂಗಳೂರು ರಾಗಿಗುಡ್ಡ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ
ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ ಸಂಭವಿಸಿದೆ. ಮೆಟ್ರೋ ನಿಲ್ದಾಣದ ಕೂಗಳತೆ ದೂರದಲ್ಲಿ ಬೆಂಕಿ ವ್ಯಾಪಿಸಿ, ದಟ್ಟ ಹೊಗೆ ಆವರಿಸಿದ್ದರಿಂದ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಯಿತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ, ಪೊಲೀಸರು ತನಿಖೆ ಶುರು ಮಾಡಿದ್ದಾರೆ.
ಬೆಂಗಳೂರು, ನವೆಂಬರ್ 22: ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ನಿಲ್ದಾಣದ ಸಮೀಪ ಶನಿವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಮೆಟ್ರೋ ನಿಲ್ದಾಣದಿಂದ ಕೂಗಳತೆ ದೂರದಲ್ಲೇ ಬೆಂಕಿ ವ್ಯಾಪಿಸಿ, ದಟ್ಟವಾದ ಹೊಗೆ ಆವರಿಸಿದ್ದರಿಂದ ಸುತ್ತಮುತ್ತಲಿನ ನಿವಾಸಿಗಳು ಮತ್ತು ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಬೆಂಕಿಯ ಜ್ವಾಲೆಗಳು ಮತ್ತು ದಟ್ಟ ಹೊಗೆಯನ್ನು ಕಂಡು ಜನರು ಬೆಚ್ಚಿಬಿದ್ದರು. ಅಗ್ನಿ ಅವಘಡದ ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಇದು ಉದ್ದೇಶಪೂರ್ವಕ ಕೃತ್ಯವೇ ಅಥವಾ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದೆಯೇ ಎಂಬುದರ ಕುರಿತು ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ಈ ಘಟನೆಯ ಬಗ್ಗೆ ತನಿಖೆ ಕೈಗೊಂಡಿದ್ದು, ಅಗ್ನಿ ಅವಘಡದ ಕಾರಣವನ್ನು ಪತ್ತೆಹಚ್ಚುವ ಕಾರ್ಯ ನಡೆಸುತ್ತಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

