Loading video

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ

| Updated By: Ganapathi Sharma

Updated on: Feb 16, 2025 | 4:51 PM

ಬೆಂಗಳೂರಿನ ಪ್ರಮುಖ ಪ್ರದೇಶವಾದ ಅರಮನೆ ಮೈದಾನದಲ್ಲಿ ಭಾನುವಾರ ಮಧ್ಯಾನ್ನ ಅಗ್ನಿ ಆಕಸ್ಮಿಕ ಸಂಭವಿಸಿದೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ತಿಳಿಸಿದ್ದು, ಸ್ಥಳಕ್ಕೆ ಧಾವಿಸಿದ ಬೆಂಕಿ ನಂದಿಸುತ್ತಿದ್ದಾರೆ. ಅದೃಷ್ಟವಶಾತ್, ಹೆಚ್ಚಿನ ಅವಘಡ ಸಂಭವಿಸಿಲ್ಲ ಎನ್ನಲಾಗಿದೆ. ಬೆಂಕಿಯ ತೀವ್ರತೆಯಿಂದ ಸ್ಥಳದಲ್ಲಿ ದಟ್ಟ ಹೋಗಿ ಆವರಿಸಿತ್ತು.

ಬೆಂಗಳೂರು, ಫೆಬ್ರವರಿ 16: ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮೈದಾನದಲ್ಲಿ ಡೆಕೋರೇಷನ್ ವೇಸ್ಟ್ ವಸ್ತುಗಳು ಇದ್ದ ಜಾಗದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕೂಡಲೇ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ