AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್‌ನ ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ದುರಂತ

ಪಂಜಾಬ್‌ನ ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ದುರಂತ

ಸುಷ್ಮಾ ಚಕ್ರೆ
|

Updated on:Oct 18, 2025 | 5:30 PM

Share

ಪಂಜಾಬ್‌ನ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ಗರೀಬ್ ರಥ ಎಕ್ಸ್‌ಪ್ರೆಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಬೆಂಕಿಯ ಅವಘಡದಿಂದ ರೈಲಿನಲ್ಲಿ ಭಯಭೀತ ವಾತಾವರಣ ನಿರ್ಮಾಣವಾಯಿತು. ಆದರೆ, ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎನ್ನಲಾಗಿದೆ. ಆರಂಭಿಕ ಮಾಹಿತಿಯ ಪ್ರಕಾರ, ಲುಧಿಯಾನದ ಹಲವಾರು ಉದ್ಯಮಿಗಳು ಪ್ರಯಾಣಿಸುತ್ತಿದ್ದ ಕೋಚ್ ಸಂಖ್ಯೆ 19ರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ.

ಫತೇಘರ್ ಸಾಹಿಬ್, ಅಕ್ಟೋಬರ್ 18: ಇಂದು ಪಂಜಾಬ್​ನ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ರೈಲು ಅಪಘಾತ (Train Accident) ಸಂಭವಿಸಿದೆ. ಸಿರ್ಹಿಂದ್ ರೈಲು ನಿಲ್ದಾಣದ ಬಳಿ ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್‌ನ ಒಂದು ಬೋಗಿಯಲ್ಲಿ ಬೆಂಕಿ (Fire Attack) ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇದಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ರೈಲಿನ ಎಸಿ ಬೋಗಿಗಳಲ್ಲಿ ಒಂದರಲ್ಲಿ ಹೊಗೆ ಕಾಣಿಸಿಕೊಂಡಿದೆ.

ಬೆಂಕಿಯ ಜ್ವಾಲೆಯನ್ನು ನೋಡಿದ ಲೋಕೋ ಪೈಲಟ್ ತುರ್ತು ಬ್ರೇಕ್ ಹಾಕಿ ರೈಲನ್ನು ನಿಲ್ಲಿಸಿದರು. ಬೋಗಿಯಲ್ಲಿದ್ದ ಪ್ರಯಾಣಿಕರು ತಕ್ಷಣವೇ ಇಳಿದು ತಮ್ಮ ಸಾಮಾನುಗಳನ್ನು ತೆಗೆದುಕೊಂಡು ಹೊರಗೆ ಹೋದರು. ರೈಲಿನಿಂದ ಇಳಿಯುವಾಗ ಹಲವಾರು ಪ್ರಯಾಣಿಕರು ಗಾಯಗೊಂಡರು. ಒಂದು ಗಂಟೆಯ ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 18, 2025 05:29 PM