ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ: ಕಿಡಿಗೇಡಿಗಳಿಂದ ಕೃತ್ಯ ಶಂಕೆ
ಬೆಂಗಳೂರಿನ ರಾಜಾನುಕುಂಟೆಯಲ್ಲಿ ನಿಂತಿದ್ದ ಎರಡು ಖಾಲಿ ರೈಲು ಬೋಗಿಗಳಿಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಯಲಹಂಕ ರೈಲ್ವೆ ನಿಲ್ದಾಣದ ಬಳಿಯ ಹಳಿ ಮೇಲೆ ಕಳೆದ ಒಂದು ವರ್ಷದಿಂದ ನಿಲ್ಲಿಸಿದ್ದ ಮಾಕ್ ಡ್ರಿಲ್ ಬೋಗಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ಶಂಕಿಸಲಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ.
ಬೆಂಗಳೂರು, ಅಕ್ಟೋಬರ್ 14: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ಹಳಿ ಮೇಲೆ ನಿಲ್ಲಿಸಿದ್ದ ಎರಡು ಖಾಲಿ ರೈಲು ಬೋಗಿಗಳಿಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಮಾಕ್ ಡ್ರಿಲ್ ಉದ್ದೇಶಕ್ಕಾಗಿ ಬಳಸಲಾಗುತ್ತಿದ್ದ ಈ ಬೋಗಿಗಳು ಕಳೆದ ಒಂದು ವರ್ಷದಿಂದ ಹಳಿ ಮೇಲೆ ನಿಂತಿದ್ದವು ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ರೈಲ್ವೆ ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬೆಂಕಿ ಅವಘಡದಿಂದ ಯಾವುದೇ ಪ್ರಾಣಾಪಾಯ ಅಥವಾ ಇತರ ಹಾನಿ ಸಂಭವಿಸಿಲ್ಲ. ಖಾಲಿ ಬೋಗಿಗಳು ಮಾತ್ರ ಆಹುತಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೋಗಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

