ಬೆಂಕಿ ಹೊತ್ತಿಕೊಂಡ ಅಪಾರ್ಟ್ಮೆಂಟ್ನೊಳಗೆ ಸಿಲುಕಿದ್ದ ಸಾಕು ನಾಯಿಯ ರಕ್ಷಣೆ; ವಿಡಿಯೋ ವೈರಲ್
ಹೈದರಾಬಾದಿನ ಸೋಮಾಜಿಗುಡ ಪ್ರದೇಶದ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಐದನೇ ಮಹಡಿಯಲ್ಲಿ ಬೆಂಕಿ ಮತ್ತು ದಟ್ಟ ಹೊಗೆ ಆವರಿಸಿಕೊಂಡಿತ್ತು. ಪಂಜಾಗುಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಆಲ್ಪೈನ್ ಹೈಟ್ಸ್ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ಸಂಭವಿಸಿದ್ದು, ಗ್ಯಾಸ್ ಸಿಲಿಂಡರ್ ಸ್ಫೋಟವೇ ಬೆಂಕಿ ದುರಂತಕ್ಕೆ ಕಾರಣ ಎಂದು ಶಂಕಿಸಲಾಗಿದೆ.
ಹೈದರಾಬಾದ್, ಡಿಸೆಂಬರ್ 28: ಹೈದರಾಬಾದ್ ನಗರದ ಸೋಮಾಜಿಗುಡ ಪ್ರದೇಶದ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಶನಿವಾರ ಸಂಜೆ ಬೆಂಕಿ (Fire Accident) ಕಾಣಿಸಿಕೊಂಡಿದೆ. ಪಂಜಾಗುಟ್ಟ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಆಲ್ಪ ನೈಟ್ಸ್ ಬ್ಲಾಕ್ ಎಂದೂ ಕರೆಯಲ್ಪಡುವ ಆಲ್ಪೈನ್ ಹೈಟ್ಸ್ ನಲ್ಲಿ ಈ ಘಟನೆ ಸಂಭವಿಸಿದೆ. ಅಪಾರ್ಟ್ಮೆಂಟ್ನ 5ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಲೂ ದಟ್ಟ ಹೊಗೆ ಹರಡಿತ್ತು. ಈ ವೇಳೆ ಅಪಾರ್ಟ್ಮೆಂಟ್ ನಿವಾಸಿಗಳು ಸುರಕ್ಷತೆಗಾಗಿ ಹೊರಗೆ ಧಾವಿಸಿದ್ದಾರೆ.
ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಲು 3 ಅಗ್ನಿಶಾಮಕ ವಾಹನಗಳನ್ನು ಸೇವೆಗೆ ನಿಯೋಜಿಸಲಾಗಿತ್ತು. ಈ ವೇಳೆ ಅಪಾರ್ಟ್ಮೆಂಟ್ ಒಳಗೆ ಸಿಲುಕಿದ್ದ ಸಾಕು ನಾಯಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಕಾಪಾಡುತ್ತಿರುವ ವಿಡಿಯೋ ವೈರಲ್ ಆಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ