ಬಿಹಾರದಲ್ಲಿ ಅಮೃತಸರ-ಸಹರ್ಸಾ ಜನಸೇವಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ

Updated on: Oct 24, 2025 | 11:04 PM

ಅಮೃತಸರದಿಂದ ಸಹರ್ಸಾಗೆ ಪ್ರಯಾಣಿಸುತ್ತಿದ್ದ ಜನಸೇವಾ ಎಕ್ಸ್‌ಪ್ರೆಸ್ ರೈಲಿಗೆ ಬಿಹಾರದ ಸೋನ್‌ಬರ್ಸಾ ಕಚಚಾರಿ ನಿಲ್ದಾಣದ ಬಳಿ ಬೆಂಕಿ ಹೊತ್ತಿಕೊಂಡಿದೆ. ರೈಲಿನ ಒಂದು ಕೋಚ್‌ನಿಂದ ಹೊಗೆ ಬರುತ್ತಿರುವುದು ಕಂಡುಬಂದಿದ್ದು, ಈ ಕೋಚ್ ರೈಲಿನಿಂದ ಬೇರ್ಪಟ್ಟಿದೆ. ಸಿಗರೇಟ್ ಅಥವಾ ಮೊಬೈಲ್ ಫೋನ್ ಸ್ಫೋಟದಿಂದ ಈ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇನ್ನೂ ಕೆಲವು ವರದಿಗಳು ಬೆಂಕಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಸೂಚಿಸುತ್ತವೆ.

ನವದೆಹಲಿ, ಅಕ್ಟೋಬರ್ 24: ಇಂದು ಸಂಜೆ ಬಿಹಾರದ (Bihar) ಸೋನ್‌ಬರ್ಸಾ ಕಚಹರಿ ನಿಲ್ದಾಣದ ಬಳಿ ಅಮೃತಸರದಿಂದ ಸಹರ್ಸಾಗೆ ಪ್ರಯಾಣಿಸುತ್ತಿದ್ದ ಜನಸೇವಾ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಜನರಲ್ ಕಂಪಾರ್ಟ್‌ಮೆಂಟ್ ಕೋಚ್ ಒಂದರಿಂದ ಹೊಗೆ ಬರುತ್ತಿರುವುದು ಕಂಡುಬಂದ ತಕ್ಷಣ ಅಲರ್ಟ್ ಮಾಡಲಾಗಿದೆ. ಈ ಘಟನೆ ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದ್ದು, ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಬೆಂಕಿ ಹೊತ್ತಿಕೊಂಡ ಕೋಚ್ ಅನ್ನು ರೈಲಿನಿಂದ ಬೇರ್ಪಡಿಸಲಾಗಿದೆ.

ಸಿಗರೇಟ್ ಅಥವಾ ಮೊಬೈಲ್ ಫೋನ್ ಸ್ಫೋಟದಿಂದ ಈ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇನ್ನೂ ಕೆಲವು ವರದಿಗಳು ಬೆಂಕಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಸೂಚಿಸುತ್ತವೆ. ಬೆಂಕಿಯ ನಿಜವಾದ ಕಾರಣವನ್ನು ಕಂಡುಹಿಡಿಯಲು ವಿಧಿವಿಜ್ಞಾನ ತಂಡವು ಪರಿಶೀಲನೆ ನಡೆಸುತ್ತಿದೆ. ಈ ಘಟನೆಯ ನಂತರ ರೈಲು ಸಹರ್ಸಾ ನಿಲ್ದಾಣವನ್ನು ಸುರಕ್ಷಿತವಾಗಿ ತಲುಪಿತು. ಇದುವರೆಗೂ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಒಬ್ಬ ಪ್ರಯಾಣಿಕನಿಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More