Video: ಹೊತ್ತಿ ಉರಿದ ಮೈಸೂರು-ಉದಯ್ಪುರ ಪ್ಯಾಲೇಸ್ ಕ್ವೀನ್ ಹಮ್ಸಫರ್ ರೈಲು
ಮೈಸೂರು-ಉದಯ್ಪುರ ಪ್ಯಾಲೇಸ್ ಕ್ವೀನ್ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮೈಸೂರಿನಿಂದ ಉದಯ್ಪುರಕ್ಕೆ ಹೊರಟಿದ್ದ ರೈಲು ಬೆಂಗಳೂರು ದಕ್ಷಿಣ ಜಿಲ್ಲೆಯ ಚೆನ್ನಪಟ್ಟಣದ ತಾಲೂಕಿನ ವಂದಾರಗುಪ್ಪೆ ಬಳಿ ನಿಲ್ಲಿಸಿ ಬೆಂಕಿ ನಂದಿಸಲಾಯಿತು. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಹಾಗೂ ರೈಲ್ವೆ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ.
ರಾಮನಗರ, ಜುಲೈ 04: ಮೈಸೂರು-ಉದಯ್ಪುರ ಪ್ಯಾಲೇಸ್ ಕ್ವೀನ್ ಹಮ್ಸಫರ್ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮೈಸೂರಿನಿಂದ ಉದಯ್ಪುರಕ್ಕೆ ಹೊರಟಿದ್ದ ರೈಲು ಬೆಂಗಳೂರು ದಕ್ಷಿಣ ಜಿಲ್ಲೆಯ ಚೆನ್ನಪಟ್ಟಣದ ತಾಲೂಕಿನ ವಂದಾರಗುಪ್ಪೆ ಬಳಿ ನಿಲ್ಲಿಸಿ ಬೆಂಕಿ ನಂದಿಸಲಾಯಿತು. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಹಾಗೂ ರೈಲ್ವೆ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ.
ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಬೆಳಗ್ಗೆ 11.45 ರ ಸುಮಾರಿಗೆ ರೈಲು ಚನ್ನಪಟ್ಟಣ ದಾಟುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿತ್ತು. ಎಂಜಿನ್‌ನಿಂದ ಕಿಡಿಗಳು ಬರುತ್ತಿರುವುದನ್ನು ಗಮನಿಸಿದ ಲೋಕೋ ಪೈಲಟ್ ತಕ್ಷಣವೇ ರೈಲನ್ನು ನಿಲ್ಲಿಸಿದರು. ಅವರು ತಕ್ಷಣ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದರು.ಬೆಂಕಿ ಸಣ್ಣ ಪ್ರಮಾಣದಲ್ಲಿತ್ತು ಮತ್ತು ಎಂಜಿನ್ ವಿಭಾಗಕ್ಕೆ ಮಾತ್ರ ಸೀಮಿತವಾಗಿತ್ತು ಎಂದು ವರದಿಯಾಗಿದೆ. ತಾಂತ್ರಿಕ ದೋಷದಿಂದ ಇದು ಸಂಭವಿಸಿರಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ