Video: ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಹಮ್ಸಫರ್ ರೈಲು

Updated on: Jul 04, 2025 | 12:09 PM

ಮೈಸೂರು-ಉದಯ್​ಪುರ ಪ್ಯಾಲೇಸ್​ ಕ್ವೀನ್ ಎಕ್ಸ್​ಪ್ರೆಸ್​ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮೈಸೂರಿನಿಂದ ಉದಯ್​ಪುರಕ್ಕೆ ಹೊರಟಿದ್ದ ರೈಲು ಬೆಂಗಳೂರು ದಕ್ಷಿಣ ಜಿಲ್ಲೆಯ ಚೆನ್ನಪಟ್ಟಣದ ತಾಲೂಕಿನ ವಂದಾರಗುಪ್ಪೆ ಬಳಿ ನಿಲ್ಲಿಸಿ ಬೆಂಕಿ ನಂದಿಸಲಾಯಿತು. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಹಾಗೂ ರೈಲ್ವೆ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ.

ರಾಮನಗರ, ಜುಲೈ 04: ಮೈಸೂರು-ಉದಯ್​ಪುರ ಪ್ಯಾಲೇಸ್​ ಕ್ವೀನ್ ಹಮ್ಸಫರ್ ಎಕ್ಸ್​ಪ್ರೆಸ್​ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮೈಸೂರಿನಿಂದ ಉದಯ್​ಪುರಕ್ಕೆ ಹೊರಟಿದ್ದ ರೈಲು ಬೆಂಗಳೂರು ದಕ್ಷಿಣ ಜಿಲ್ಲೆಯ ಚೆನ್ನಪಟ್ಟಣದ ತಾಲೂಕಿನ ವಂದಾರಗುಪ್ಪೆ ಬಳಿ ನಿಲ್ಲಿಸಿ ಬೆಂಕಿ ನಂದಿಸಲಾಯಿತು. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಹಾಗೂ ರೈಲ್ವೆ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ.

ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಬೆಳಗ್ಗೆ 11.45 ರ ಸುಮಾರಿಗೆ ರೈಲು ಚನ್ನಪಟ್ಟಣ ದಾಟುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿತ್ತು. ಎಂಜಿನ್‌ನಿಂದ ಕಿಡಿಗಳು ಬರುತ್ತಿರುವುದನ್ನು ಗಮನಿಸಿದ ಲೋಕೋ ಪೈಲಟ್ ತಕ್ಷಣವೇ ರೈಲನ್ನು ನಿಲ್ಲಿಸಿದರು. ಅವರು ತಕ್ಷಣ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದರು.ಬೆಂಕಿ ಸಣ್ಣ ಪ್ರಮಾಣದಲ್ಲಿತ್ತು ಮತ್ತು ಎಂಜಿನ್ ವಿಭಾಗಕ್ಕೆ ಮಾತ್ರ ಸೀಮಿತವಾಗಿತ್ತು ಎಂದು ವರದಿಯಾಗಿದೆ. ತಾಂತ್ರಿಕ ದೋಷದಿಂದ ಇದು ಸಂಭವಿಸಿರಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More